10ರಿಂದ ಸಾಲಿಗ್ರಾಮದಲ್ಲಿ ಯಕ್ಷ ಮಹೋತ್ಸವ
ಕೋಟ: ನೃತ್ಯ ತರಬೇತಿ, ಯಕ್ಷಗಾನ ಪ್ರಸಾಧನ ಶಿಬಿರ, ಹೂವಿನಕೋಲು ತರಬೇತಿ ಮುಂತಾದ ಕಾರ್ಯಕ್ರಮಗಳನ್ನು ನಿರಂತರ ಹಮ್ಮಿಕೊಳ್ಳುತ್ತಿರುವ ಇಲ್ಲಿನ ಕಲಾಪೀಠ ಸಂಸ್ಥೆಯು 10ರಿಂದ ಸಾಲಿಗ್ರಾಮದ ಸದಾನಂದ ರಂಗ ಮಂಟಪದಲ್ಲಿ “¾ÚßOÚÐ’ ಮಹೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದೆ.ಬೆಂಗಳೂರಿನ ಕನ್ನಡ ಸಂಸ್ಕೃತಿ ಇಲಾಖೆಯ ಆಶ್ರಯದಲ್ಲಿ ನೆರವೇರಲಿರುವ ಈ ಕಾರ್ಯಕ್ರಮವು ಉಡುಪಿಯ ಯಕ್ಷಗಾನ ಕಲಾರಂಗದ ಉಪಾಧ್ಯಕ್ಷ ಎಸ್.ವಿ. ಭಟ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಜಿಲ್ಲಾ ವಾರ್ತಾಧಿಕಾರಿ ಎಂ. ಜುಂಜಣ್ಣ, ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿಯ ಸದಸ್ಯ ಯು. ದುಗ್ಗಪ್ಪ ಹಾಗೂ ಐರೋಡಿ ಯಕ್ಷಗಾನ ಕಲಾ ಕೇಂದ್ರದ ಅಧ್ಯಕ್ಷ ಎ.ಎಸ್.ಎನ್. ಹೆಬ್ಬಾರ್ ಮುಖ್ಯ ಅಥಿತಿಗಳಾಗಿ ಪಾಲ್ಗೊಳ್ಳಲಿದ್ದಾರೆ.ಕೆ. ನರಸಿಂಹ ತುಂಗ ಅವರ ಎನ್ನುವ ಯಕ್ಷಗಾನ ಪ್ರದರ್ಶನ ನಡೆಯಲಿದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.
ಇಂದು ನಾವುಂದದಲ್ಲಿ ಆರೋಗ್ಯ ತಪಾಸಣೆ
ಉಡುಪಿ: ಮಂಗಳೂರು ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಾವುಂದ ಸ.ಹಿ.ಪ್ರಾ. ಶಾಲೆಯಲ್ಲಿ ಫೆ. 10 ರಂದು ಬೆಳಗ್ಗೆ 9.30ಕ್ಕೆ ಆರೋಗ್ಯ ತಪಾಸಣೆ ಶಿಬಿರ ನಡೆಯಲಿದೆ.ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಾವುಂದ, ಆದರ್ಶ ಆಸ್ಪತ್ರೆ ಉಡುಪಿ ಆಶ್ರಯದಲ್ಲಿ ನಡೆಯುವ ಶಿಬಿರವನ್ನು ಎಸ್ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಉದ್ಘಾಟಿಸುವರು. ಆದರ್ಶ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಜಿ.ಎಸ್. ಚಂದ್ರಶೇಖರ್ ಮಾಹಿತಿ ನೀಡುವರು.ತಜ್ಞ ವೈದ್ಯರು ತಪಾಸಣೆ ನಡೆಸಲಿದ್ದು, ಲಭ್ಯವಿರುವ ಔಷಧಿ ವಿತರಿಸುವರು. ಶಿಬಿರದಲ್ಲಿ ಆಧುನಿಕ ಜೀವನ ಶೈಲಿ ಹಾಗೂ ಕಾಯಿಲೆಗಳ ಬಗ್ಗೆ ಉಪಯುಕ್ತ ಮಾಹಿತಿ ನೀಡುವ ವಿವಿಧ ಪ್ರಾತ್ಯಕ್ಷಿಕೆ ಪ್ರದರ್ಶನವಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.