ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಉಡುಪಿ

ಪ್ರೇಮಿಗಳ ಅಸಭ್ಯ ವರ್ತನೆ ವಿರುದ್ಧ ಕ್ರಮಕ್ಕೆ ಬಜರಂಗದಳ ಆಗ್ರಹ

Parashurama
Updated On : 14 Feb 2013, 12:58 pm

ಉಡುಪಿ: ಪ್ರೇಮಿಗಳ ದಿನಾಚರಣೆ ನೆಪದಲ್ಲಿ ಪ್ರೇಮ ಸಲ್ಲಾಪಗಳನ್ನು ನಡೆಸುವ ಪ್ರೇಮಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಉಡುಪಿ ಜಿಲ್ಲಾ ಬಜರಂಗದಳ ಪೊಲೀಸ್ ಇಲಾಖೆಯನ್ನು ಆಗ್ರಹಿಸಿದೆ. ಪ್ರೇಮಿಗಳ ದಿನಾಚರಣೆ ಇತ್ತೀಚಿನ ವರ್ಷದಲ್ಲಿ ಅಶ್ಲೀಲ ವರ್ತನೆಗಳ ಮೂಲಕ ನಮ್ಮ ದೇಶದ ಸಾಂಸ್ಕೃತಿಕ ಮೌಲ್ಯಕ್ಕೆ ಕಳಂಕ ತರುತ್ತಿದೆ. ಆದ್ದರಿಂದ ಪ್ರೇಮಿಗಳ ದಿನಾಚರಣೆಗೆ ಸಂಬಂಧಿಸಿದ ಹಾಗೆ ಯಾವುದೇ ಡಿಜೆ, ಪಬ್ಬುಗಳಿಗೆ ಜಿಲ್ಲಾಡಳಿತ ಅವಕಾಶ ನೀಡಬಾರದು. ಸಾರ್ವಜನಿಕ ಸ್ಥಳಗಳಲ್ಲಿ, ಪಾರ್ಕ್‌ಗಳಲ್ಲಿ ಅಶ್ಲೀಲ- ಅಸಭ್ಯ ರೀತಿಯಲ್ಲಿ ವರ್ತಿಸುವವರ ವಿರುದ್ಧ ಜಿಲ್ಲಾಡಳಿತ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಒಂದು ವೇಳೆ ಕಾನೂನು ಕ್ರಮ ಜರುಗಿಸದಿದ್ದರೆ ಜಿಲ್ಲಾಡಳಿತವೇ ನೇರ ಹೊಣೆ ಎಂದು ಬಜರಂಗದಳದ ಜಿಲ್ಲಾ ಸಂಚಾಲಕ ಸುನೀಲ್ ಕೆ.ಆರ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments