ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಉಡುಪಿ

ಅಣ್ಣಯ್ಯ ನಾಯಕ್ ಪಟ್ಲ ನೇಮಕ

Parashurama
Updated On : 15 Feb 2013, 1:27 am

ಉಡುಪಿ: ಜಾತ್ಯತೀತ ಜನತಾದಳದ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಅಣ್ಣಯ್ಯ ನಾಯಕ್ ಪಟ್ಲ ಅವರನ್ನು ನೇಮಕ ಮಾಡಲಾಗಿದೆ.
ಬಿಜೆಪಿಯ ಸಕ್ರಿಯ ಕಾರ್ಯಕರ್ತರಾಗಿದ್ದ ಅವರು ಇತ್ತೀಚೆಗೆ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿ ಜೆಡಿಎಸ್ ಪಕ್ಷವನ್ನು ಸೇರಿದ್ದಾರೆ. ಜೆಡಿಎಸ್ ಜಿಲ್ಲಾಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ ಅವರನ್ನು ರಾಜ್ಯ ಸಂಘಟನಾ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.
ನಾಯಕ್ ಅವರು ಪ್ರಸುತ್ತ ಪಟ್ಲ ರೂರಲ್ ಎಜ್ಯುಕೇಶನ್ ಸೊಸೈಟಿ, ಕರಂಬಳ್ಳಿ ಜನಸೇವಾ ಟ್ರಸ್ಟ್, ಉಡುಪಿ ಜಿಲ್ಲಾ ಗುತ್ತಿಗೆದಾರರ ಸಂಘಗಳ ಪ್ರಧಾನ ಕಾರ್ಯದರ್ಶಿಯಾಗಿದ್ದು, ಹೆರ್ಗ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿದ್ದಾರೆ. ಅಲ್ಲದೇ ರಾಜಾಪುರ ಸಾರಸ್ವತ ಬ್ರಾಹ್ಮಣ ಸಂಘ ಬಂಟಕಲ್ಲು ಇದರ ಮಾಜಿ ಅಧ್ಯಕ್ಷರು, ಬಂಟಕಲ್ಲು ಶ್ರೀ ದುರ್ಗಾಪರಮೇಶ್ವರಿ ದೇವಳದಲ್ಲಿ ಆಡಳಿತ ಮಂಡಳಿ ಸದಸ್ಯರಾಗಿ 15 ವರ್ಷ ಕರ್ತವ್ಯ ನಿರ್ವಹಿಸಿದ್ದರು.
ರಾಜಕೀಯ ಕ್ಷೇತ್ರಕ್ಕೆ 1972ರಲ್ಲಿ ಭಾರತೀಯ ಜನಸಂಘದ ಮೂಲಕ ಪ್ರವೇಶ ಪಡೆದ ಅವರು, 1980ರಿಂದ ಭಾರತೀಯ ಜನತಾ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿ, ಉಡುಪಿ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷರಾಗಿ, ಅವಿಭಜಿತ ದ.ಕ. ಜಿಲ್ಲಾ ಬಿಜೆಪಿ ಕಾಯಕಾರಿ ಸಮಿತಿ ಸದಸ್ಯರಾಗಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments