ವಂಡ್ಸೆ ನಾರಾಯಣ ಗಾಣಿಗ ದಂಪತಿಗೆ ಉಡುಪ ಪ್ರಶಸ್ತಿ ಪ್ರದಾನ
ಕೋಟ: ಇಲ್ಲಿನ ಶ್ರೀ ಹಿರೇಮಹಾಲಿಂಗೇಶ್ವರ ದೇವಳದ ವಠಾರದಲ್ಲಿ ಸಾಲಿಗ್ರಾಮ ಮಕ್ಕಳ ಮೇಳದ ವತಿಯಿಂದ ನೀಡಲಾಗುವ ಉಡುಪ ಪ್ರಶಸ್ತಿಯನ್ನು ಈ ಬಾರಿ ವಂಡ್ಸೆ ನಾರಾಯಣ ಗಾಣಿಗ ದಂಪತಿಗೆ ಇತ್ತೀಚೆಗೆ ಪ್ರದಾನ ಮಾಡಲಾಯಿತು.
ಉದ್ಯಮಿ ಎ.ಸಿ. ಕುಂದರ್ ಮುಖ್ಯ ಅತಿಥಿಯಾಗಿ ಆಗಮಿಸಿ, ಸಾಲಿಗ್ರಾಮ ಮಕ್ಕಳ ಮೇಳವನ್ನು ನಡೆಸುತ್ತಿರುವ ಶ್ರೀಧರ ಹಂದೆ ಅವರ ಯಕ್ಷಗಾನ ಕಲೆಯನ್ನು ಉಳಿಸುವ ಕಾರ್ಯವನ್ನು ಶ್ಲಾಘಿಸಿದರು. ಅತಿಥಿಗಳಾಗಿ ವೇದಮೂರ್ತಿ ಗಣೇಶ ಭಟ್, ಮಕ್ಕಳ ಮೇಳದ ಕಾರ್ಯಾಧ್ಯಕ್ಷ ಕೆ.ಎಂ. ಉಡುಪ, ಉಪಾಧ್ಯಕ್ಷ ಶಿವಾನಂದ ಹಂದೆ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಸುಜಯೀಂದ್ರ ಹಂದೆ ನಿರ್ವಹಿಸಿದರು. ಶ್ರೀದರ ಹಂದೆ ಸ್ವಾಗತಿಸಿದರು. ಜನಾರ್ದನ ಹಂದೆ ವಂದಿಸಿ ಅತಿಥಿಗಳಿಗೆ ಸ್ಮರಣಿಕೆ ನೀಡಿದರು.
ನಂತರ ಈ ಮಕ್ಕಳ ಮೇಳದಲ್ಲಿ 40 ವರ್ಷಗಳ ಹಿಂದೆ ತರಬೇತಿ ಪಡೆದ ಹಿಂದಿನ ಕಲಾವಿದರಿಂದ ಕೃಷ್ಣಾರ್ಜುನ ಮತ್ತು ವೀರ ವೃಷಸೇನ ಯಕ್ಷಗಾನ ಪ್ರದರ್ಶನ ನಡೆಯಿತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.