ಶಿರ್ಲಾಲು: ಸಿದ್ದಗಿರಿ ಕ್ಷೇತ್ರ ಲೋಕಾರ್ಪಣೆ
ಕಾರ್ಕಳ: ಇಲ್ಲಿನ ಶಿರ್ಲಾಲು ಭಗವಾನ್ ಶ್ರೀ ಆದಿನಾಥ ಸ್ವಾಮಿ ಬಸದಿಯಲ್ಲಿ ಆರಂಭಗೊಂಡಿರುವ ಪಂಚಕಲ್ಯಾಣ ಮಹೋತ್ಸವ ಹಾಗೂ ಪ್ರತಿಷ್ಠಾ ಮಹೋತ್ಸವದ 4ನೇ ದಿನವಾದ ಗುರುವಾರ ಸಿದ್ದಗಿರಿ ಕ್ಷೇತ್ರ ಲೋಕಾರ್ಪಣೆ ಮತ್ತು ತ್ರಿಮೂರ್ತಿ ಜಿನಬಿಂಬಗಳ ದಿವ್ಯದರ್ಶನ ಕಾರ್ಯಕ್ರಮ ವೈಭವದಿಂದ ನಡೆಯಿತು.
ಧರ್ಮಸ್ಥಳದ ಡಾ. ವೀರೇಂದ್ರ ಹೆಗ್ಗಡೆ ಅವರು ಈ ಸಿದ್ದಗಿರಿ ಕ್ಷೇತ್ರವನ್ನು ಲೋಕಾರ್ಪಣೆ ಮಾಡಿದರು ಮತ್ತು ಧರ್ಮಸ್ಥಳ ಕ್ಷೇತ್ರದಿಂದ ಶಿರ್ಲಾಲು ಕ್ಷೇತ್ರಕ್ಕೆ ರು. 5 ಲಕ್ಷ ದೇಣಿಗೆ ಘೋಷಿಸಿದರು.
ನಂತರ ಮಾತನಾಡಿದ ಅವರು, ಇಂದು ಶಿರ್ಲಾಲುವಿನಲ್ಲಿ ನಡೆಯುತ್ತಿರುವ ಕಾರ್ಯಕ್ರಮ ಅದ್ಭುತವಲ್ಲ. ಆದರೆ, ಭವಿಷ್ಯದಲ್ಲಿ ಈ ಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ಐತಿಹಾಸಿಕ ಮಹತ್ವ ಬರಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಸಮಾರಂಭದಲ್ಲಿ ಹೊಂಬುಜ ಜೈನ ಮಠದ ಸ್ವಸ್ತಿ ಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ ಅಧ್ಯಕ್ಷತೆ ವಹಿಸಿದ್ದರು.
ಕಾರ್ಕಳ ಜೈನ ಮಠದ ಸ್ವಸ್ತಿ ಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ, ಕಂಬದಹಳ್ಳಿ ಸ್ವಸ್ತಿ ಶ್ರೀ ಭಾನುಕೀರ್ತಿ ಭಟ್ಟಾರಕ ಸ್ವಾಮೀಜಿ ಆಶೀರ್ವಚನ ನೀಡಿದರು.
ಸಮಿತಿಯ ಕಾರ್ಯಾಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸಂಸದ ಜಯಪ್ರಕಾಶ್ ಹೆಗ್ಡೆ, ಕಾರ್ಕಳ ಶಾಸಕ ಎಚ್. ಗೋಪಾಲ ಭಂಡಾರಿ, ಮಾಜಿ ಶಾಸಕ ವಿ. ಸುನಿಲ್ ಕುಮಾರ್, ಶಿರ್ಲಾಲು ಗ್ರಾ.ಪಂ. ಅಧ್ಯಕ್ಷ ನಾರಾಯಣ ಶೆಟ್ಟಿ, ಅಳದಂಗಡಿ ಅರಸ ಪದ್ಮಪ್ರಸಾದ್ ಅಜಿಲ, ಡಾ. ಮಹಾವೀರ್ ಜೈನ್ ದಂಪತಿ, ವರ್ಧಮಾನ ಇಂದ್ರ, ಅನಂತ್ರಾಜ ಪೂವಣಿ, ರತ್ನವರ್ಮ ಪೂವಣಿ ಮತ್ತು ವಿನಂತಿ ಪೂವಣಿ ದಂಪತಿಯ ಕುಟುಂಬಿಕರು ಇದ್ದರು.
ಸನತ್ ಕುಮಾರ್ ಜೈನ್ ಸ್ವಾಗತಿಸಿದರು. ಅಜಿತ್ ಕುಮಾರ್ ಅಂಡಾರು ಕಾರ್ಯಕ್ರಮ ನಿರೂಪಿಸಿದರು. ಪ್ರೊ. ಗುಣಪಾಲ ಕಡಂಬ ವಂದಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.