ಹೆಬ್ರಿ: ಜವಾಹರ್ ನವೋದಯ ಸಿಬ್ಬಂದಿ ಮುಷ್ಕರ, ಜಯಪ್ರಕಾಶ್ ಹೆಗ್ಡೆ ಭೇಟಿ
ಹೆಬ್ರಿ: ಅಖಿಲ ಭಾರತ ನವೋದಯ ವಿದ್ಯಾಲಯ ಸಿಬ್ಬಂದಿ ಸಂಘದ (ಎಐಎನ್ವಿಎಸ್ಎ) ಕರೆಯಂತೆ ಜಿಲ್ಲೆಯ ಚಾರಾ ಜವಾಹರ್ ನವೋದಯ ವಿದ್ಯಾಲಯದ ಸಿಬ್ಬಂದಿ ತರಗತಿ ಬಹಿಷ್ಕರಿಸಿ ವಿದ್ಯಾಲಯದ ಕ್ಯಾಂಪಸ್ನಲ್ಲಿ ಪಿಂಚಣಿ ಸೌಲಭ್ಯ, ಬೋಧಕೇತರ ವರ್ಗದವರಿಗೆ ಶೇ. 10 ವಿಶೇಷ ಭತ್ಯೆ, ಆರನೇ ವೇತನ ಆಯೋಗದಂತೆ ಸೇವಾ ಬಡ್ತಿ ಮತ್ತಿತರರ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸಿಬ್ಬಂದಿ ಅನಿರ್ಧಿಷ್ಟಾವಧಿ ಮುಷ್ಕರ ನಡೆಸುತ್ತಿದ್ದು, ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೆ. ಜಯಪ್ರಕಾಶ ಹೆಗ್ಡೆ ಬುಧವಾರ ಮುಷ್ಕರ ನಿರತರನ್ನು ಭೇಟಿ ಮಾಡಿ ಮನವಿ ಸ್ವೀಕರಿಸಿದರು. ಬಳಿಕ ಮಾತನಾಡಿದ ಸಂಸದ ಕೆ. ಜಯಪ್ರಕಾಶ ಹೆಗ್ಡೆ, ಬೇಡಿಕೆ ಈಡೇರಿಸುವ ಭರವಸೆ ನೀಡಿದರು. ಚಾರಾ ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲ ಕೆ.ವಿ. ಸುರೇಶ್, ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನೀರೆ ಕೃಷ್ಣ ಶೆಟ್ಟಿ ಮುಂತಾದವರು ಹಾಜರಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.