ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಉಡುಪಿ

ಎಂಡೋ, ತಂಬಾಕು ಉತ್ಪನ್ನ ಕಂಪನಿಗಳಿಗೆ ಸಾಮಾಜಿಕ ಜವಾಬ್ದಾರಿ ಇಲ್ಲ: ಆಚಾರ್

Lingaraj Badiger
Updated On : 20 Feb 2013, 11:45 am

ಕುಂದಾಪುರ: ಇಲ್ಲಿನ ಹಂಗಾರಕಟ್ಟೆಯ ಅಭಿವೃದ್ಧಿ ಸಂಸ್ಥೆಯ ವತಿಯಿಂದ ಕೋಟೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಮತ್ತು ನಿರ್ವಹಣೆ ವಿಭಾಗಗಳ ಸಹಯೋಗದೊಂದಿಗೆ -ಕಾರ್ಪೋರೇಟ್ ಸೋಶಿಯಲ್ ರೆಸ್ಪಾನ್ಸಿಬಿಲಿಟಿ ವಿಚಾರ ಸಂಕೀರಣವನ್ನು ಇತ್ತೀಚೆಗೆ ಏರ್ಪಡಿಸಲಾಗಿತ್ತು.
ಮಂಗಳೂರು ಸಹ್ಯಾದ್ರಿ ಎಂಜಿನಿಯರಿಂಗ್ ಕಾಲೇಜಿನ ನಿರ್ದೇಶಕ ಡಾ. ಅನಂತಪದ್ಮನಾಭ ಆಚಾರ್ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು, ಎಂಡೋಸಲ್ಫಾನ್, ತಂಬಾಕು ಉತ್ಪನ್ನ ಮಾಡುವಂತಹ ಬಹುರಾಷ್ಟ್ರೀಯ ಕಂಪೆನಿಗಳ ಉತ್ಪನ್ನಗಳನ್ನು ಹೆಸರಿಸಿದ ಅವರು ಇವುಗಳ ಬಳಕೆಯಿಂದ ಜನರು ವಿಶಿಷ್ಟ ಕಾಯಿಲೆಗಳಿಂದ ನರಳುತ್ತಿದ್ದಾರೆ. ಆದರೆ ಇವನ್ನು ನಿಷೇಧಿಸುವ ಬಗ್ಗೆ ಸರ್ಕಾರ ಮನಸ್ಸು ಮಾಡಿಲ್ಲ. ಈ ಕಂಪೆನಿಗಳೂ ತಮ್ಮ ಸಾಮಾಜಿಕ ಜವಾಬ್ದಾರಿಯನ್ನು ನಿರ್ವಹಿಸುತ್ತಿಲ್ಲ. ಬದಲಿಗೆ ಸಂತ್ರಸ್ತರಿಗೆ ಅಷ್ಟಿಷ್ಟು ಪರಿಹಾರ ನೀಡುವ ನಾಟಕವಾಡಿ, ಆ ಕೆಲಸವನ್ನೂ ಯಾವುದೋ ಎನ್.ಜಿ.ಓಗಳಿಗೆ ವಹಿಸಲಾಗಿದೆ. ಒಟ್ಟಿನಲ್ಲಿ ಸಂಬಂಧಿತರು ಸಾಮಾಜಿಕ ಜವಾಬ್ದಾರಿಗಳನ್ನು ಮರೆತಿದ್ದರಿಂದ ಜನರು ಕಷ್ಟಪಡುವಂತಾಗಿದೆ ಎಂದವರು ವಿವರಿಸಿದರು.
ಸಮಾರಂಭದಲ್ಲಿ ಕೋಟೇಶ್ವರ ಗ್ರಾಪಂ ಅಧ್ಯಕ್ಷ ರಾಜಶೇಖರ ಶೆಟ್ಟಿ ವಿಚಾರ ಸಂಕಿರಣ ಉದ್ಘಾಟಿಸಿ ಶುಭ ಹಾರೈಸಿದರು. ಅಧ್ಯಕ್ಷತೆಯನ್ನು ಕೋಟೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ಎಂ. ಅಭಿಷೇಕ ವಹಿಸಿದ್ದರು. ಸಮಾರಂಭದಲ್ಲಿ ಸಂಪ್ಮನೂಲ ವ್ಯಕ್ತಿಗಳಾಗಿ ಮಣಿಪಾಲ ಮ್ಯಾನೇಜ್‌ಮೆಂಟ್ ಸಂಸ್ಥೆಯ ಹರಿಣಿ ಶರ್ಮ ಆಗಮಸಿಸಿದ್ದರು. ತಾಪಂ ಸದಸ್ಯ ಮಂಜು ಬಿಲ್ಲವ, ಗ್ರಾಪಂ ಉಪಾಧ್ಯಕ್ಷೆ ಒಪಿಲಯಾ ಡಿಸಿಲ್ವಾ, ನಿವೃತ್ತ ಖಜಾನಾಧಿಕಾರಿ ವಿ. ತಾರಾನಾಥ ಆಚಾರ್ ಇದ್ದರು. ಅಭಿವೃದ್ಧಿ ಸಂಸ್ಥೆಯ ಕಾರ್ಯದರ್ಶಿ ರಮೇಶ್ ವಕ್ವಾಡಿ ಸ್ವಾಗತಿಸಿ ಪ್ರಸ್ತಾವನೆಗೈದರು. ಜಿ.ಜಿ. ಮೋಳ್ ನಿರೂಪಿಸಿ, ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement