ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಉಡುಪಿ

ಕುಂಜಿಬೆಟ್ಟು: 24ರಂದು ರೈತ ಸಮಾವೇಶ

Lingaraj Badiger
Updated On : 20 Feb 2013, 11:46 am

ಉಡುಪಿ: ಉಡುಪಿ ಜಿಲ್ಲಾ ಕೃಷಿಕ ಸಂಘದ ವತಿಯಿಂದ ಇಲ್ಲಿನ ಕುಂಜಿಬೆಟ್ಟು ಶಾರದಾ ಮಂಟಪದಲ್ಲಿ 24 ರಂದು 'ರೈತ ಸಮಾವೇಶ'ವನ್ನು ಏರ್ಪಡಿಸಲಾಗಿದೆ.
 ಈ ಸಮಾವೇಶವನ್ನು ಅಂದು ಬೆಳಗ್ಗೆ 10 ಗಂಟೆಗೆ ಕೇಮಾರು ಸಾಂದೀಪನಿ ಸಾಧನಾಶ್ರಮದ ಶ್ರೀಈಶ ವಿಠಲದಾಸ ಸ್ವಾಮೀಜಿ ಉದ್ಘಾಟಿಸಲಿದ್ದಾರೆ.
ಈ ಬಗ್ಗೆ ಸಂಘದ ಅಧ್ಯಕ್ಷ ರಾಮಕೃಷ್ಣ ಶರ್ಮ ಬಂಟಕಲ್ಲು ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಮುಖ್ಯ ಅತಿಥಿಯಾಗಿ ಎಂಪಿಎಂಸಿಯ ಮಾಜಿ ಅಧ್ಯಕ್ಷ ಸುರೇಶ್ ನಾಯಕ್ ಭಾಗವಹಿಸಲಿದ್ದಾರೆ.
ಗುರುವಾಯನಕೆರೆ ನಾಗರಿಕ ಸೇವಾ ಟ್ರಸ್ಟಿನ ಅಧ್ಯಕ್ಷ ಸೋಮನಾಥ ನಾಯಕ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.
ಈ ಸಮಾವೇಶದಲ್ಲಿ ಬೆಳೆ ಪರಿವರ್ತನೆಯ ಅಗತ್ಯ, ಪರಿಸರ ಸ್ನೇಹಿ ಸಾವಯವ ಕೃಷಿ, ಕಣ್ಮರೆಯಾಗುತ್ತಿರುವ ಬತ್ತದ ಕೃಷಿ, ಕರಾವಳಿಯಲ್ಲಿ ಹೈನುಗಾರಿಕೆಯ ಸವಾಲು, ಮಿತಿ ವ್ಯಯದ ಹೈನುಗಾರಿಕೆ, ಕೃಷಿ ಯಂತ್ರಗಳು - ತಾಂತ್ರಿಕತೆ, ತೋಟಗಾರಿಕೆಯಲ್ಲಿ ತಾಂತ್ರಿಕತೆ ಇತ್ಯಾದಿ ವಿಷಯಗಳ ಬಗ್ಗೆ ತಜ್ಞರು ವಿಚಾರ ವಿನಿಮಯ ನಡೆಸಲಿದ್ದಾರೆ.
ಕಂದಾಯ, ವಿದ್ಯುತ್, ಸಹಕಾರಿ, ಕೃಷಿ, ತೋಟಗಾರಿಕಾ ಇಲಾಖೆಯ ಅಧಿಕಾರಿಗಳು ತಮ್ಮ ಇಲಾಖೆಯಿಂದ ಕೃಷಿಗೆ ಸಿಗುವ ಸೌಲಭ್ಯಗಳು, ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ. ಆಧುನಿಕ ಕೃಷಿ ಯಂತ್ರೋಪಕರಣಗಳು, ಕೃಷಿ ಸಲಕರಣೆಗಳು, ಕೃಷಿ ಸಂಬಂಧ ಪತ್ರಿಕೆಗಳು, ವಿವಿಧ ತಳಿಯ ಬೀಜ ಹಾಗೂ ಗಿಡಗಳು ಮಾರಟ ಮತ್ತು ಪ್ರದರ್ಶನಗಳನ್ನು ಆಯೋಜಿಸಲಾಗಿದೆ.
ಸುದ್ದಿಗೋಷ್ಠಿಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಭಟ್ ಕುದಿ, ಕಾರ್ಯದರ್ಶಿ ರವೀಂದ್ರ ಪೂಜಾರಿ, ಉಪಾಧ್ಯಕ್ಷ ಎಂ. ಭಾಸ್ಕರ ಶೆಟ್ಟಿ, ಕೋಶಾಧಿಕಾರಿ ಪಾಂಡುರಂಗ ನಾಯಕ್ ಹಿರಿಯಡ್ಕ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement