ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಉಡುಪಿ

ಗುಂಡಿಬೈಲು: ಯಕ್ಷಗಾನ ಕಲಾಕ್ಷೇತ್ರ ಸುವರ್ಣ ಮಹೋತ್ಸವ

Lingaraj Badiger
Updated On : 20 Feb 2013, 11:46 am

ಉಡುಪಿ: ಯಕ್ಷಗಾನ ಕಲಾಕ್ಷೇತ್ರ ಗುಂಡಿಬೈಲು ಇದರ 62ನೇ ವಾರ್ಷಿಕೋತ್ಸವವು ಸಂಸ್ಥೆಯ ಅಧ್ಯಕ್ಷ ಜಿ. ಬಾಬುಗೌಡ ಅವರ ಅಧ್ಯಕ್ಷತೆಯಲ್ಲಿ ಉಡುಪಿ ಗುಂಡಿಬೈಲಿನ ಯಕ್ಷಗಾನ ಕಲಾಕ್ಷೇತ್ರದ ಸುವರ್ಣ ಮಹೋತ್ಸವ ಸಭಾಭವನದಲ್ಲಿ ಇತ್ತೀಚೆಗೆ ಜರಗಿತು.
ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಡುಪಿ ಮಾಜಿ ಶಾಸಕ ಯು.ಆರ್. ಸಭಾಪತಿ, ಅಡ್ಕದಕಟ್ಟೆ ಪಂಚಧೂಮಾವತಿ ದೈವಸ್ಥಾನದ ಮೊಕ್ತೇಸರ ಡಿ. ಬಾಲಕೃಷ್ಣ ಶೆಟ್ಟಿ, ವಜ್ರಮಹೋತ್ಸವ ಸಮಿತಿಯ ಅಧ್ಯಕ್ಷ ಇಂದ್ರಾಳಿ ಜಯಕರ ಶೆಟ್ಟಿ, ಸಾಲಿಗ್ರಾಮ ಮೇಳದ ಮಾಲೀಕ ಪಿ. ಕಿಶನ್ ಕುಮಾರ್ ಹೆಗ್ಡೆ, ಉದ್ಯಮಿ ಪ್ರಮೋದ್ ಮಧ್ವರಾಜ್ ಆಗಮಿಸಿದ್ದರು.
ಸಂಸ್ಥೆಯ ಹಿರಿಯರಾದ ಬನ್ನಂಜೆ ಬಾಬು ಅಮೀನ್ ಸ್ವಾಗತಿಸಿದರು. ಕಾರ್ಯದರ್ಶಿ ಕೇಶವಮೂರ್ತಿ ಬೆಲ್ಪತ್ರೆ ವಾರ್ಷಿಕ ವರದಿ ಮಂಡಿಸಿದರು. ಕೋಶಾಧಿಕಾರಿ ಎನ್. ಶೀನಪ್ಪ ಸುವರ್ಣ ವಂದಿಸಿದರು. ಸಭಾ ಕಾರ್ಯಕ್ರಮದ ಬಳಿಕ ಸಂಘದ ಸದಸ್ಯರಿಂದ ಗುಳ್ಮೆ ನಾರಾಯಣ ಪ್ರಭು ನಿರ್ದೇಶನದಲ್ಲಿ 'ಸುದರ್ಶನ ವಿಜಯ' ಮತ್ತು 'ಜಾಂಬವತಿ ಕಲ್ಯಾಣ' ಎಂಬ ಯಕ್ಷಗಾನ ಬಯಲಾಟ ಪ್ರದರ್ಶನಗೊಂಡಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement