ನಗರಾಡಳಿತ ಚುನಾವಣೆ: 19 ನಾಮಪತ್ರ ಸಲ್ಲಿಕೆ
ಉಡುಪಿ: ಜಿಲ್ಲೆಯ ನಗರ ಸ್ಥಳೀಯಾಡಳಿತ ಸಂಸ್ಥೆ ಚುನಾವಣೆಗೆ ನಾಮಪತ್ರ ಸಲ್ಲಿಸಲು 6ನೇ ದಿನವಾದ ಗುರುವಾರ ನಗರಸಭೆ, ಪಟ್ಟಣ ಪಂಚಾಯಿತಿ ಮತ್ತು 2 ಪುರಸಭೆಗಳಿಗೆ 18 ನಾಮಪತ್ರಗಳು ಸಲ್ಲಿಕೆಯಾಗಿವೆ. ಬುಧವಾರ 1 ನಾಮಪತ್ರ ಸಲ್ಲಿಕೆಯಾಗಿತ್ತು.
ಉಡುಪಿ ನಗರಸಭೆಗೆ 4 ನಾಮಪತ್ರ ಸಲ್ಲಿಕೆಯಾಗಿದ್ದು, ಅದರಲ್ಲಿ ಕಾಂಗ್ರೆಸ್ ಪಕ್ಷದಿಂದ 3 ಮತ್ತು ಪಕ್ಷೇತರ 1 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಸಾಲಿಗ್ರಾಮ ಪಟ್ಟಣ ಪಂಚಾಯಿತಿಗೆ ಕಾಂಗ್ರೆಸ್ ಪಕ್ಷದಿಂದ 7 ಮಂದಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.
ಕಾರ್ಕಳ ಪುರಸಭೆಗೆ 3 ನಾಮಪತ್ರ ಸಲ್ಲಿಕೆಯಾಗಿದ್ದು, ಕಾಂಗ್ರೆಸ್ ಪಕ್ಷದಿಂದ 1, ಜೆಡಿಎಸ್ ಪಕ್ಷದಿಂದ 2 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿರುತ್ತಾರೆ. ಕುಂದಾಪುರ ಪುರಸಭೆಗೆ 4 ನಾಮಪತ್ರ ಸಲ್ಲಿಕೆಯಾಗಿದ್ದು, ಅದರಲ್ಲಿ ಬಿಜೆಪಿಯಿಂದ 1, ಪಕ್ಷೇತರ 2 ಅಭ್ಯರ್ಥಿಗಳು (ಒಬ್ಬ ಅಭ್ಯರ್ಥಿ 2 ನಾಮಪತ್ರಗಳನ್ನು ಸಲ್ಲಿಸಿದ್ದಾರೆ) ನಾಮಪತ್ರ ಸಲ್ಲಿಸಿರುತ್ತಾರೆ.
ಫೆ. 23 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿರುತ್ತದೆ. 25ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, 27ರಂದು ನಾಮಪತ್ರ ಹಿಂದೆ ಪಡೆಯಲು ಅವಕಾಶ ಇದೆ ಜಿಲ್ಲಾ ಚುನಾವಣಾಧಿಕಾರಿ ಡಾ.ಎಂ.ಟಿ. ರೇಜು ತಿಳಿಸಿದ್ದಾರೆ.