ಕುಂದಾಪುರ: ಪಲ್ಸ್ ಪೋಲಿಯೊಗೆ ಚಾಲನೆ
ಕುಂದಾಪುರ: ಪಲ್ಸ್ ಪೋಲಿಯೊ ಕಾರ್ಯಕ್ರಮದ ಅಂಗವಾಗಿ ಕಿರಿಮಂಜೇಶ್ವರ ಪ್ರಾಥಮಿಕ ಆರೋಗ್ಯ ಕೇಂದ್ರದ 24 ಲಸಿಕಾ ಕೇಂದ್ರಗಳಲ್ಲಿ ಪೋಲಿಯೊ ಲಸಿಕೆ ಹಾಕುವ ಕಾರ್ಯಕ್ರಮ ನಡೆಯಿತು.
ಕಿರಿಮಂಜೇಶ್ವರ ಗ್ರಾ.ಪಂ. ಅಧ್ಯಕ್ಷ ಸುಬ್ಬಣ್ಣ ಶೆಟ್ಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ವಿದ್ಯಾ, ಕಾಲ್ತೋಡು ಆಯುರ್ವೇದ ವೈದ್ಯೆ ಡಾ. ವೀಣಾ ಕಾರಂತ, ಆರೋಗ್ಯ ಕೇಂದ್ರದ ಸಿಬ್ಬಂದಿ, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಹಾಗೂ ಸ್ವಯಂ ಸೇವಕರು ಹಾಗೂ ಗ್ರಾ.ಪಂ. ಸದಸ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.