ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಉಡುಪಿ

ಅತ್ಯಾಚಾರ; ನ್ಯಾಯಾಂಗ ಬಂಧನ ವಿಸ್ತರಣೆ

Mainashree
Updated On : 15 Jul 2013, 10:37 am

ಉಡುಪಿ: ಮಣಿಪಾಲ ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣದ ಐವರು ಆರೋಪಿಗಳಿಗೆ ಉಡುಪಿ ಜಿಲ್ಲಾ ನ್ಯಾಯಾಲಯ ಜು. 29ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿದೆ. ಈ ಹೇಯ ಕೃತ್ಯದ ಅತ್ಯಾಚಾರಿ ಆರೋಪಿಗಳಾದ ಯೋಗೀಶ್ ಪೂಜಾರಿ, ಹರಿಪ್ರಸಾದ್ ಪೂಜಾರಿ ಮತ್ತು ಆನಂದ ಪಾಣಾರ ಹಾಗೂ ಸಾಕ್ಷ್ಯಾಧಾರಗಳನ್ನು ನಾಶಪಡಿಸಿದ ಆರೋಪಿಗಳಾದ ಬಾಲಚಂದ್ರ ಪೂಜಾರಿ ಮತ್ತು ಹರೀಂದ್ರ ಪೂಜಾರಿಗೆ ನ್ಯಾಯಾಲಯ ಈಗಾಗಲೇ ಜು. 15ರವರೆಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ಈ ಹಿನ್ನೆಲೆಯಲ್ಲಿ ಸೋಮವಾರ ಮತ್ತೆ ಅವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ಜಿಲ್ಲಾ ಹೆಚ್ಚುವರಿ ಮುಖ್ಯ ನ್ಯಾಯಿಕ ದಂಡಾಧಿಕಾರಿ ಚಂದ್ರಶೇಖರ್ ಎಲ್ಲರಿಗೂ ಮತ್ತೆ 14 ದಿನಗಳ ನ್ಯಾಯಾಂಗ ಬಂಧನ ಆದೇಶಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement