ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಉಡುಪಿ

'ಬಾಕಿ ಕಾಮಗಾರಿ ತಕ್ಷಣ ಪೂರ್ಣಗೊಳಿಸಿ'

Lingaraj Badiger
Updated On : 20 Jul 2013, 12:15 pm

ಮಣಿಪಾಲ: ಜಿಲ್ಲೆಯಲ್ಲಿ ಪೂರ್ಣಗೊಳ್ಳದೆ ಬಾಕಿಯಾಗಿರುವ ಎಲ್ಲಾ ಇಲಾಖೆಯ ಕಾಮಗಾರಿಗಳನ್ನು ತಕ್ಷಣ ಪೂರ್ಣಗೊಳಿಸಬೇಕು ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿರುವ ರಾಜ್ಯ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ನಿರ್ದೇಶಕ ಮಹೇಶ್ವರ ರಾವ್ ಜಿಲ್ಲೆಯ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.
ಅವರು ಶುಕ್ರವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಕಾಮಗಾರಿ ಬಾಕಿಯಾಗಿರುವ ಲೋಕೋಪಯೋಗಿ - ಮೀನುಗಾರಿಕಾ ರಸ್ತೆಗಳು, ವಿವಿಧ ಇಲಾಖೆಯ ಕಟ್ಟಡಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು ಎಂದು ್‌ವರು ಲೋಕೋಪಯೋಗಿ, ಪಂಚಾಯತ್‌ರಾಜ್ ಎಂಜಿನಿಯರಿಂಗ್ ಇಲಾಖೆ ಮತ್ತು ನಿರ್ಮಿತಿ ಕೇಂದ್ರದ ಅಧಿಕಾರಿಗಳಿಗೆ ಸೂಚಿಸಿದರು.
ಸಕಾಲ ಯೋಜನೆ: ಜಿಲ್ಲಾಧಿಕಾರಿ ಡಾ.ಎಂ.ಟಿ. ರೇಜು ಮಾತನಾಡಿ, ಜಿಲ್ಲೆಯಲ್ಲಿ ಇದುವರೆಗೆ ಸಕಾಲ ಯೋಜನೆಯಲ್ಲಿ 5,25,804 ಅರ್ಜಿ ಸ್ವೀಕರಿಸಲಾಗಿದ್ದು, 5,14,787 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ ಎಂದರು.
ಜಿಲ್ಲೆಯಲ್ಲಿ ಈ ಬಾರಿಯ ಮಳೆಗಾಲದಲ್ಲಿ ಇದುವರೆಗೆ 911.30 ಮಿ.ಮೀ. ಮಳೆ ಆಗಿದೆ. ರಸ್ತೆಗಳಿಗೆ ಸುಮಾರು ರು. 23.03 ಕೋಟಿ, 36 ಸೇತುವೆಗಳಿಗೆ ರು. 1.41 ಕೋಟಿಗಳಷ್ಟು ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.
ಉಡುಪಿಯಲ್ಲಿ 650 ಮೀ. ಮತ್ತು ಕುಂದಾಪುರದಲ್ಲಿ 465 ಮೀ. ಸಮುದ್ರ ಕೊರತೆ ಸಂಭವಿಸಿದ್ದು, ಸುಮಾರು ರು. 1.24 ಕೋಟಿಗಳಷ್ಟು ಹಾನಿ ಸಂಭವಿಸಿದೆ ಎಂದವರು ಹೇಳಿದರು.
ರು. 5 ಕೋಟಿ ಪರಿಹಾರ: ಜಿಲ್ಲೆಯಲ್ಲಿ ಸಂಭವಿಸಿರುವ ಪ್ರಾಕೃತಿಕ ವಿಕೋಪ ಪರಿಹಾರಕ್ಕೆ ರು. 5 ಕೋಟಿ ಬಿಡುಗಡೆಯಾಗಿದೆ. ಸಮುದ್ರ ಕೊರೆತ ತಡೆಗೆ ರು. 15 ಕೋಟಿ ಅನುದಾನ ಬಿಡುಗಡೆಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಅವರು ಹೇಳಿದರು.
ಉಡುಪಿಯಲ್ಲಿ ಮಿನಿ ವಿಧಾನಸೌಧ ನಿರ್ಮಾಣಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದ್ದು, ಕುಂದಾಪುರದ ಮಿನಿ ವಿಧಾನಸೌಧದ ಕಾಮಗಾರಿ 2 ತಿಂಗಳಲ್ಲಿ ಮುಗಿಯಲಿದೆ. ಬ್ರಹ್ಮಾವರ ಹಾಗೂ ಬೈಂದೂರು ವಿಶೇಷ ತಹಸೀಲ್ದಾರ್ ಕಚೇರಿಯ ಕಂಪ್ಯೂಟರ್ ವ್ಯವಸ್ಥೆಯಲ್ಲಿ ಸಮಸ್ಯೆ ಕಂಡುಬರುತ್ತಿದ್ದು, ನಿಗದಿತ ಅವಧಿಯಲ್ಲಿ ಸಾರ್ವಜನಿಕರಿಗೆ ಸೇವೆ ನೀಡಲು ತೊಂದರೆಯಾಗುತ್ತಿದ್ದು, ಅವುಗಳನ್ನು ಬದಲಾಯಿಸಬೇಕಿದೆ ಎಂದು ಮನವಿ ಮಾಡಿದರು.
ಉಡುಪಿ ನಗರಸಭೆಗೆ ನಗರೋತ್ಥಾನ ಯೋಜನೆಯಡಿ ಮೊದಲ ಹಂತದಲ್ಲಿ ರು. 39.30 ಕೋಟಿ ಬಿಡುಗಡೆ ಆಗಿದ್ದು, ವಿವಿಧ ಕಾಮಗಾರಿಗಳಿಗೆ 38.43 ಕೋಟಿ ವ್ಯಯಿಸಿ, ಶೇ. 97 ಪ್ರಗತಿ ಆಗಿದೆ. 2ನೇ ಹಂತದಲ್ಲಿ ರು. 45 ಕೋಟಿ ವೆಚ್ಚದ 40 ಕಾಮಗಾರಿಗಳಿಗೆ ಕಾರ್ಯಾದೇಶ ನೀಡಲಾಗಿದೆ.
ಗೊಬ್ಬರ ಘಟಕ ಸ್ಥಾಪನೆ ಪ್ರಸ್ತಾವನೆ: ಜಿಲ್ಲೆಯಲ್ಲಿ ಘನತ್ಯಾಜ್ಯ ವಿಲೇವಾರಿಗೆ ಮತ್ತು ಎರೆಹುಳು ಗೊಬ್ಬರ ಘಟಕ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಉಡುಪಿಯಲ್ಲಿ ಶೇ. 30ರಷ್ಟು ಒಳಚರಂಡಿ ಯೋಜನೆ ಸಂಪರ್ಕ ಪೂರ್ಣಗೊಂಡಿದ್ದು, ಮಲ್ಪೆ, ಮಣಿಪಾಲ ಇತರೆಡೆ ಒಳಚರಂಡಿ ಕಾಮಗಾರಿಗೆ ರು. 106 ಕೋಟಿ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಮಾನಂದ ನಾಯಕ್ ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಎ. ಪ್ರಭಾಕರ ಶರ್ಮ, ಕುಂದಾಪುರ ಉಪವಿಭಾಗಾಧಿಕಾರಿ ಯೋಗೀಶ್ವರ್, ಅಪರ ಜಿಲ್ಲಾಧಿಕಾರಿ ಕುಮಾರ್ ಹಾಗೂ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement