ವ್ಯವಹಾರದಲ್ಲಿ ಶಿಸ್ತು ಇದ್ದಾಗ ಯಶಸ್ಸು ಸಾಧ್ಯ: ಚಂದ್ರಶೇಖರ್
ಬ್ರಹ್ಮಾವರ: ಸ್ವಉದ್ಯೋಗವನ್ನು ಆರಂಭಿಸಿ ವ್ಯವಹರಿಸುವಾಗ ಶಿಸ್ತು ಮತ್ತು ವ್ಯವಹಾರ ಜ್ಞಾನವನ್ನು ಅಳವಡಿಸಿಕೊಂಡರೆ ಹೆಚ್ಚಿನ ಯಶಸ್ಸು ಪಡೆಯಲು ಸಾಧ್ಯ ಎಂದು ಮಣಿಪಾಲ ಸಿಂಡಿಕೇಟ್ ಬ್ಯಾಂಕ್ನ ಸಹಾಯಕ ಮಹಾಪ್ರಬಂಧಕ ಎ.ಎಸ್. ಚಂದ್ರಶೇಖರ್ ಅಭಿಪ್ರಾಯಪಟ್ಟರು.
ಅವರು ಇಲ್ಲಿನ ರುಡ್ಸೆಟ್ ಸಂಸ್ಥೆಯಲ್ಲಿ ನಬಾರ್ಡ್ನ ಬೆಂಗಳೂರು ಪ್ರಾದೇಶಿಕ ಕಚೇರಿಯ ಪ್ರಾಯೋಜಕತ್ವದಲ್ಲಿ ನಡೆದ ಕಂಪ್ಯೂಟರ್ ಹಾರ್ಡ್ವೇರ್ ಹಾಗೂ ನೆಟ್ವರ್ಕಿಂಗ್ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿದರು.
ಕಾರ್ಯಕ್ರಮದಲ್ಲಿ ರುಡ್ಸೆಟ್ ಸಂಸ್ಥೆಯ ನಿರ್ದೇಶಕ ವಿಜಯಕುಮಾರ್ ಡಿ. ನೇರ್ಲೆಕರ್ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಂಸ್ಥೆಯ ಉಪನ್ಯಾಸಕ ಕರುಣಾಕರ ಜೈನ್ ಸ್ವಾಗತಿಸಿ ತರಬೇತಿಯ ಹಿನ್ನೋಟವನ್ನು ನೀಡಿದರು. ಬಸವರಾಜ್ ಎಸ್. ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
45 ದಿನಗಳ ಕಾಲ ನಡೆದ ಈ ತರಬೇತಿಯಲ್ಲಿ ಉಡುಪಿ, ಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳಿಂದ 37 ಮಂದಿ ಭಾಗವಹಿಸಿ ತರಬೇತಿಯ ಸದುಪಯೋಗ ಪಡೆದರು.