8ರಂದು ಯೋಗ, ಮಧುಮೇಹ ಚಿಕಿತ್ಸಾ ಕೇಂದ್ರ ಉದ್ಘಾಟನೆ
ಉಡುಪಿ: ಸ್ವಾಮಿ ವಿವೇಕಾನಂದ ಜಿಲ್ಲಾ ಯೋಗ ಸ್ವಾಸ್ಥ್ಯ ಕೇಂದ್ರ ಹಾಗೂ ಮಧುಮೇಹ ಯೋಗ ಚಿಕಿತ್ಸಾ ಕೇಂದ್ರದ ಉದ್ಘಾಟನಾ ಸಮಾರಂಭವು ಇಲ್ಲಿನ ಶ್ರೀ ಕಾಶಿಮಠದ ಶ್ರೀ ಪದ್ಮಾವತಿ ಕಲ್ಯಾಣ ಮಂಟಪದಲ್ಲಿ ಜೂ. 8ರಂದು ಬೆಳಗ್ಗೆ 10.30ಕ್ಕೆ ನೆರವೇರಲಿದೆ ಎಂದು ಶ್ರೀ ವೇದವ್ಯಾಸ ಯೋಗ ಪ್ರತಿಷ್ಠಾನದ ಕಾರ್ಯದರ್ಶಿ ಯೋಗ ಗುರು ಡಾ.ಕೆ. ರಾಘವೇಂದ್ರ ಆರ್. ಪೈ ಹೇಳಿದರು. ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸ್ವಾಮಿ ವಿವೇಕಾನಂದ ಜಿಲ್ಲಾ ಯೋಗ ಸ್ವಾಸ್ಥ್ಯ ಕೇಂದ್ರದ ಉದ್ಘಾಟನೆಯನ್ನು ಸಂಸದ ಕೆ. ಜಯಪ್ರಕಾಶ್ ಹೆಗ್ಡೆ, ಮಧುಮೇಹ ತಡೆ ಆಂದೋಲನವನ್ನು ಉಡುಪಿಯ ಶಾರದಾ ವಸತಿ ಶಾಲೆಯ ಪ್ರಾಂಶುಪಾಲ ವಿದ್ಯಾವಂತ ಆಚಾರ್ಯ ನೆರವೇರಿಸಲಿರುವರು. ಅಧ್ಯಕ್ಷತೆಯನ್ನು ಶಾಸಕ ಪ್ರಮೋದ್ ಮಧ್ವರಾಜ್ ವಹಿಸಲಿದ್ದು, ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರಭಾಕರ ಶರ್ಮ ಶುಭಾಶಂಸನೆ ಮಾಡಲಿರುವರು ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಸ್ವಾಮಿ ವಿವೇಕಾನಂದ ಜಿಲ್ಲಾ ಯೋಗ ಸ್ವಾಸ್ಥ್ಯ ಕೇಂದ್ರದ ನಿರ್ದೇಶಕ ಸಿ.ಎ. ಸುರೇಂದ್ರ ನಾಯಕ್ ಉಪಸ್ಥಿತರಿದ್ದರು.