ಬಾಲಗೋಪಾಲಕೃಷ್ಣ ಮೂರ್ತಿ ಪುನರ್ ಪ್ರತಿಷ್ಠಾಪನೆ
ಪರ್ಕಳ: ಇಲ್ಲಿನ ಕೆಳಪರ್ಕಳದ ತಿರುವಿನಲ್ಲಿದ್ದ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಹಳೇ ಕಟ್ಟಡವನ್ನು ಭಕ್ತಾಭಿಮಾನಿಗಳ ಸಹಕಾರದಿಂದ ದುರಸ್ತಿಗೊಳಿಸಿ ವಿಶೇಷ ಶಕ್ತಿಯನ್ನು ಹೊಂದಿರುವ ಬಾಲ ಗೋಪಾಲಕೃಷ್ಣ ದೇವರ ಮೂರ್ತಿಯನ್ನು ಪರ್ಕಳ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಆಡಳಿತ ಮೊಕ್ತೇಸರ ಪಿ. ಶ್ರೀನಿವಾಸ ಉಪಾಧ್ಯ ಅವರ ನೇತೃತ್ವದಲ್ಲಿ ಅರ್ಚಕ ಉಪೇಂದ್ರ ಬಾಯರಿ ಅವರು ವಾಸ್ತುಪೂಜೆ, ವಾಸ್ತುಹೋಮ ಮುಂತಾದ ಧಾರ್ಮಿಕ ವಿಧಿವಿಧಾನಗಳೊಂದಿಗೆ ಪುನರ್ ಪ್ರತಿಷ್ಠಾಪಿಸಲಾಯಿತು. ಭಕ್ತಾಭಿಮಾನಿಗಳು ಭಾಗವಹಿಸಿದ್ದರು.