ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ
ಉದ್ಯಾವರ: ಇಲ್ಲಿನ ಸೇವಾ- ಸಾಂಸ್ಕೃತಿಕ ವೇದಿಕೆ ಉದ್ಯಾವರ ಫ್ರೆಂಡ್ಸ್ ಸರ್ಕಲ್ ಆಶ್ರಯದಲ್ಲಿ ಯು.ಎಫ್.ಸಿ. ಪುಸ್ತಕ ಭಂಡಾರದಿಂದ ಪಿಯು ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ವಿತರಣಾ ಕಾರ್ಯಕ್ರಮ ಇತ್ತೀಚಿಗೆ ಜರುಗಿತು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸ್ಥಳೀಯ ಹಿಂದೂ ಹಿ.ಪ್ರಾ. ಶಾಲಾ ಸಂಚಾಲಕ ಗೋವಿಂದ ಶೆಣೈ ಪುಸ್ತಕಗಳನ್ನು ವಿತರಿಸಿ, ಶಿಕ್ಷಣಕ್ಕಾಗಿ ಸಹಾಯ ಪಡೆದ ವಿದ್ಯಾರ್ಥಿಗಳು ಮುಂದೆ ತಾವು ಸಂಪಾದಿಸುವಾಗ ಬೇರೆ ವಿದ್ಯಾರ್ಥಿಗಳಿಗೆ ಸಹಾಯ ಮಾಡಿ ಋಣವನ್ನು ತೀರಿಸಬೇಕು ಎಂದರು.
ತಾಪಂ ಸದಸ್ಯ ಗಿರೀಶ್ ಕುಮಾರ್, ಗ್ರಾಪಂ ಸದಸ್ಯರಾದ ರಿಯಾಜ್ ಪಳ್ಳಿ, ಮೇರಿ ಡಿಸೋಜ, ಮಾಜಿ ಅಧ್ಯಕ್ಷೆ ಚಂದ್ರಾವತಿ ಎಸ್. ಭಂಡಾರಿ, ಸಂಸ್ಥೆಯ ಮಾಜಿ ಕಾರ್ಯದರ್ಶಿ ತಿಲಕರಾಜ ಸಾಲ್ಯಾನ್ ಉಪಸ್ಥಿತರಿದ್ದರು. ಸಂಸ್ಥೆಯ ನಿರ್ದೇಶಕ ಉದ್ಯಾವರ ನಾಗೇಶ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಧ್ಯಕ್ಷ ಅನೂಪ್ ಸ್ವಾಗತಿಸಿದರು. ಪನಿಯಾಡಿ ಆಬಿದ್ ಆಲಿ ನಿರೂಪಿಸಿದರು. ಸಹ ಕಾರ್ಯದರ್ಶಿ ವಿಶ್ವನಾಥ ಎಸ್. ಪೂಜಾರಿ ವಂದಿಸಿದರು.