ಮಲೇರಿಯಾ ಭೀತಿ: ಸ್ವಚ್ಛತೆ ಪಾಲನೆಗೆ ಸೂಚನೆ
ಉಡುಪಿ: ನಗರಸಭಾ ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಾಣ ಪ್ರದೇಶದಲ್ಲಿ ಮಲೇರಿಯಾ ಪ್ರಕರಣಗಳು ಜಾಸ್ತಿಯಾಗಿರುವುದು ಪತ್ತೆಯಾಗಿದೆ. ಆದ್ದರಿಂದ ಕಟ್ಟಡ ನಿರ್ಮಾಣಕಾರರು, ಮಾಲೀಕರು, ಗುತ್ತಿಗೆದಾರರು ಕಟ್ಟಡ ನಿರ್ಮಾಣ ಪ್ರದೇಶದಲ್ಲಿ ಸಾರ್ವಜನಿಕ ಆರೋಗ್ಯ ಹಿತದೃಷ್ಟಿಯಿಂದ ಕಟ್ಟಡ ನಿರ್ಮಾಣ ಪ್ರದೇಶದಲ್ಲಿ ಸೊಳ್ಳೆ ಉತ್ಪತ್ತಿ ಉಂಟಾಗದಂತೆ, ಕಟ್ಟಡದ ಪರಿಸರದಲ್ಲಿ ನೀರು ನಿಲ್ಲದಂತೆ ಹಾಗೂ ತ್ಯಾಜ್ಯ ವಸ್ತು ಸಂಗ್ರಹವಾಗದಂತೆ ಎಚ್ಚರ ವಹಿಸಬೇಕು ಎಂದು ನಗರಸಭಾ ಪೌರಾಯುಕ್ತರು ಸೂಚಿಸಿದ್ದಾರೆ.
ಕಟ್ಟಡ ನಿರ್ಮಾಣ ಪ್ರದೇಶದಲ್ಲಿ ನೀರಿನ ತೊಟ್ಟಿ, ಡ್ರಮ್ ಗಳಲ್ಲಿರುವ ನೀರು ಬದಲಾಯಿಸಿ ಶುಚಿಗೊಳಿಸಬೇಕು, ನೀರು ಸಂಗ್ರಹಣಾ ಪರಿಕರಗಳನ್ನು ಸೊಳ್ಳೆ ಪ್ರವೇಶಿಸದಂತೆ ಭದ್ರವಾಗಿ ಮುಚ್ಚಬೇಕು, ಕಟ್ಟಡ ಕಾರ್ಮಿಕರಲ್ಲಿ ಯಾವುದೇ ಜ್ವರ ಕಂಡು ಬಂದಲ್ಲಿ ರಕ್ತ ಪರೀಕ್ಷೆ ಮಾಡಿಸಿ ಸೂಕ್ತ ಚಿಕಿತ್ಸೆಗೆ ಒಳಪಡಿಸಬೇಕು, ಲಾರ್ವಾ ಉತ್ಪತ್ತಿ ತಾಣಗಳಿಗೆ ಔಷಧಿ ಸಿಂಪಡಣಾ ಕಾರ್ಯ ಕೈಗೊಳ್ಳಬೇಕು ಎಂದು ಆದೇಶಿಸಿರುವ ಪೌರಾಯುಕ್ತ, ಯಾವುದೇ ಕ್ರಮ ಕೈಗೊಳ್ಳದಿದ್ದಲ್ಲಿ ಹಾಗೂ ಪ್ರಕರಣಗಳು ಮರುಕಳಿಸಿದರೆ ಕಟ್ಟಡ ನಿರ್ಮಾಣಕ್ಕೆ ನೀಡಿರುವ ಪರವಾನಗಿ ರದ್ದು ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ.