ಕೋ-ಆಪರೇಟಿವ್ ಟೌನ್ ಬ್ಯಾಂಕ್ ಶತಮಾನೋತ್ಸವ ಸಮಾರೋಪ
ಉಡುಪಿ: ಉಡುಪಿ ಕೋ- ಅಪರೇಟಿವ್ ಟೌನ್ ಬ್ಯಾಂಕ್ 1912ರಲ್ಲಿ ಸ್ಥಾಪನೆಯಾಗಿದ್ದು, ಶತಮಾನೋತ್ಸವದ ಅಂಗವಾಗಿ ವರ್ಷಪೂರ್ತಿ ವೈವಿಧ್ಯಮಯ ಕಾರ್ಯಕ್ರಮವನ್ನಾಚರಿಸಿ 16ರಂದು ಸಮಾರೋಪ ಸಮಾರಂಭ ನಡೆಯಲಿದೆ ಎಂದು ಬ್ಯಾಂಕ್ ಅಧ್ಯಕ್ಷ ಕೃಷ್ಣರಾಜ ಸರಳಾಯ ತಿಳಿಸಿದ್ದಾರೆ.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, 15ರಂದು ಪೂರ್ಣಪ್ರಜ್ಞಾ ಸಭಾಂಗಣದಲ್ಲಿ ಗ್ರಾಹಕರ ಸಮಾವೇಶವನ್ನು ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಉದ್ಘಾಟಿಸಲಿದ್ದಾರೆ. 16ರಂದು ಬೆಳಗ್ಗೆ 10 ಗಂಟೆಗೆ ಶತಮಾನೋತ್ಸವದ ಅಂಗವಾಗಿ ನಡೆಸಿದ ವಿವಿಧ ಸ್ಪರ್ಧೆಗಳ ಬಹುಮಾನ ವಿತರಣಾ ಕಾರ್ಯಕ್ರಮಯನ್ನು ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.
ಮೊಯ್ಲಿ ಉದ್ಘಾಟನೆ: ಸಂಜೆ 3 ಗಂಟೆಗೆ ಸಮಾರೋಪ ಸಮಾರಂಭವನ್ನು ಕೇಂದ್ರ ಸಚಿವ ಎಂ. ವೀರಪ್ಪ ಮೊಯ್ಲಿ ಉದ್ಘಾಟಿಸಲಿದ್ದು, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅಧ್ಯಕ್ಷತೆ ವಹಿಸಲಿರುವರು. ಜಿಲ್ಲೆಯ ಸಂಸದ, ಶಾಸಕರು ಭಾಗವಹಿಸಲಿರುವರು ಎಂದು ತಿಳಿಸಿದರು.
ನಿರ್ದೇಶಕ ಮಂಡಳಿ ಉಪಾಧ್ಯಕ್ಷ ಯು.ಕೆ. ರಾಘವೇಂದ್ರ ರಾವ್, ನಿರ್ದೇಶಕ ಪಿ. ವಿಠಲ್ ದಾಸ್ ಶೆಣೈ, ಬ್ಯಾಂಕ್‌ನ ಪ್ರಧಾನ ವ್ಯವಸ್ಥಾಪಕ ಬಿ.ವಿ. ಲಕ್ಷ್ಮೀನಾರಾಯಣ ಮತ್ತು ಶತಮಾನೋತ್ಸವ ಸಮಿತಿಯ ಸದಸ್ಯ ಭಾಸ್ಕರ್ ರಾವ್ ಕಿದಿಯೂರು ಇದ್ದರು.