ಕಾರು ಡಿಕ್ಕಿ; ಬೈಕ್ ಸವಾರ ಸಾವು
ಕಾರ್ಕಳ: ಇಲ್ಲಿನ ಸಾಣೂರು ಗ್ರಾಮದ ಅಂಚೆ ಕಚೇರಿ ಬಳಿ ಕಾರು-ಬೈಕ್ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಗುರುವಾರ ನಡೆದಿದೆ. ನಿಸಾರ್ (22) ಮೃತರು. ವಿವೇಕಾನಂದ ಹೆಗ್ಡೆ ಎಂಬವರು ಕಾರನ್ನು ಅತಿ ವೇಗ ಹಾಗೂ ನಿರ್ಲಕ್ಷತನದಿಂದ ಚಲಾಯಿಸಿಕೊಂಡು ಬಂದು ಸಾಣೂರು ಕಡೆಯಿಂದ ಮೂಡುಬಿದಿರೆ ಕಡೆಗೆ ನಿಸಾರ್ ಸವಾರಿ ಮಾಡಿಕೊಂಡು ಹೋಗುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆದಿದ್ದಾರೆ. ಗಂಭೀರವಾಗಿ ಗಾಯಗೊಂಡ ನಿಸಾರ್ ಅವರನ್ನು ಚಿಕಿತ್ಸೆಗಾಗಿ ಕಾರ್ಕಳದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮಕ್ಬೂಲ್ ಹುಸೇನ್ ನೀಡಿದ ದೂರಿನಂತೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.