ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಉಡುಪಿ

ಪ್ರತ್ಯೇಕ ಮಹಿಳಾ ಪೊಲೀಸ್ ಠಾಣೆಗೆ ಆಗ್ರಹಿಸಿ ಮನವಿ

Vishwanath S
Updated On : 19 Jun 2013, 12:02 pm

ಉಡುಪಿ: ನಗರದಲ್ಲಿ ಮಹಿಳೆಯರಿಗಾಗಿ ಪ್ರತ್ಯೇಕ ಠಾಣೆ ತೆರೆಯುವಂತೆ ಉಡುಪಿ ಜಿಲ್ಲಾ ನಾಗರಿಕ ಸಮಿತಿ ರಾಜ್ಯ ಗೃಹ ಸಚಿವ ಕೆ.ಜೆ. ಜಾರ್ಜ್ ಅವರನ್ನು ಆಗ್ರಹಿಸಿದೆ.
ಸಮಿತಿ ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಒಳಕಾಡು ಮಂಗಳವಾರ ಉಡುಪಿಗೆ ಆಗಮಿಸಿದ್ದ ಸಚಿವರಿಗೆ ಮನವಿ ಸಲ್ಲಿಸಿದರು.
2011ರ ಜನಗಣತಿಯಂತೆ ರಾಜ್ಯದಲ್ಲಿಯೆ ಅತೀ ಹೆಚ್ಚು ಮಹಿಳೆಯರಿರುವ ಜಿಲ್ಲೆ ಉಡುಪಿ. ಅಲ್ಲದೇ ಉಡುಪಿಯು ಸುಪ್ರಸಿದ್ಧ ಪ್ರವಾಸಿ ಮತ್ತು ಯಾತ್ರಾಸ್ಥಳವಾಗಿದ್ದು, ಇಲ್ಲಿಗೆ ಬರುವ ಯಾತ್ರಾರ್ಥಿ - ಪ್ರವಾಸಿಗರಲ್ಲಿ ಬಹುಪಾಲು ಮಹಿಳೆಯರೇ ಆಗಿದ್ದಾರೆ.
ಆದರೆ, ಉಡುಪಿ ಜಿಲ್ಲೆಯಲ್ಲಿ ಮಹಿಳಾ ದೌರ್ಜನ್ಯ, ಸರಗಳ್ಳತನ, ಮಾನ ಹಾನಿಯಂತಹ ಪ್ರಕರಣಗಳು ಹೆಚ್ಚುತ್ತಿವೆ. ಇದರಿಂದ ಮಹಿಳೆಯರ ಆತ್ಮಸ್ಥೈರ್ಯ ಕುಂದುತ್ತಿದೆ. ಅಲ್ಲದೆ ಜಿಲ್ಲೆಗೆ ಕೆಟ್ಟ ಹೆಸರು ಬರುತ್ತಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ದೂರು ನೀಡಲು ಹಿಂಜರಿಕೆ: ಮಹಿಳೆಯರು ತಮ್ಮ ಮೇಲೆ ದೌರ್ಜನ್ಯಗಳಾದಾಗ ನೇರವಾಗಿ ಪೊಲೀಸ್ ಠಾಣೆಗೆ ಹೋಗಿ ದೂರು ನೀಡುವುದಕ್ಕೆ  ಹಿಂಜರಿಯುವ ಸ್ಥಿತಿ ಇದೆ. ಆದ್ದರಿಂದ ಮಹಿಳೆಯ ಪ್ರಾಣ, ಮಾನ, ಧನದ ರಕ್ಷಣೆಗಾಗಿ ಪ್ರತ್ಯೇಕ ಮಹಿಳಾ ಠಾಣೆ ನಗರದಲ್ಲಿ ಆರಂಭಿಸುವುದು ಅತ್ಯಗತ್ಯ ಎಂದು ಮನವಿಯಲ್ಲಿ ಹೇಳಿದ್ದಾರೆ.
ಮನವಿ ಸ್ವೀಕರಿಸಿದ ಸಚಿವರು, ಈ ಬಗ್ಗೆ ಜಿಲ್ಲೆಯ ಪೊಲೀಸ್ ಅಧಿಕಾರಿ ಮತ್ತು ಉಡುಪಿ ಶಾಸಕರೊಂದಿಗೆ ಚರ್ಚಿಸುವುದಾಗಿ ಭರವಸೆ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement