ರೆಟಿನಾ ತಪಾಸಣೆ ಶಿಬಿರ
ಉಡುಪಿ: ಇತ್ತೀಚಿನ ದಿನಗಳಲ್ಲಿ ವೈದ್ಯಕೀಯ ಚಿಕಿತ್ಸೆ ದುಬಾರಿಯಾಗುತ್ತಿರುವ ಸಂದರ್ಭದಲ್ಲಿ ಸಂಘ-ಸಂಸ್ಥೆಗಳು ಉಚಿತವಾಗಿ ವೈದ್ಯಕೀಯ ಶಿಬಿರಗಳನ್ನು ನಡೆಸುವುದಕ್ಕೆ ಮುಂದೆ ಬರಬೇಕು, ಇದರಿಂದ ಬಡವರು ಕೂಡ ಆರೋಗ್ಯ ಸೇವೆ ಪಡೆದುಕೊಳ್ಳುವುದಕ್ಕೆ ಸಾಧ್ಯವಾಗುತ್ತದೆ ಎಂದು ನಿವೃತ್ತ ಶಿಕ್ಷಕ ಕೋಡಿಮಾರ್ ವಿಠಲ ತಂತ್ರಿ ಅಭಿಪ್ರಾಯಪಟ್ಟರು. ಇಲ್ಲಿನ ಬೆಳ್ಮಣ್ ಪ್ರಾ. ಆ. ಕೇಂದ್ರದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ, ಮಣಿಪಾಲ ಕೆ.ಎಂ.ಸಿ. ಆಸ್ಪತ್ರೆ, ಸ್ಥಳೀಯ ಜೇಸಿಐ ಸಂಸ್ಥೆಗಳ ಆಶ್ರಯದಲ್ಲಿ ನಡೆದ ಕಣ್ಣು ಪೊರೆ ಉಚಿತ ತಪಾಸಣಾ ಶಿಬಿರ ಹಾಗೂ ಡಯಬಿಟಿಕ್ ರೋಗಿಗಳ ಕಣ್ಣಿನ ರೆಟಿನಾ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಜೇಸಿಐ ಅಧ್ಯಕ್ಷ ರಘುನಾಥ ನಾಯಕ್ ಪನಾರು ಅಧ್ಯಕ್ಷತೆ ವಹಿಸಿದ್ದರು. ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸತೀಶ್ ಪ್ರಾಸ್ತಾವಿಕ ಮಾತನಾಡಿದರು. ಜೇಸಿ ಸದಸ್ಯ ಪ್ರಶಾಂತ್ ನಿರೂಪಿಸಿದರು. ಕಾರ್ಯದರ್ಶಿ ಸಂಜೀವ ವಂದಿಸಿದರು.
ಕೆಎಂಸಿ ಆಸ್ಪತ್ರೆಯ ಕಣ್ಣಿನ ವಿಭಾಗದ ಡಾ. ಕೇತಕಿ ಮತ್ತು ವೈದ್ಯರ ತಂಡ ಶಿಬಿರ ನಡೆಸಿಕೊಟ್ಟರು, ಸುಮಾರು 75 ಹೆಚ್ಚು ಮಂದಿ ಶಿಬಿರದಲ್ಲಿ ಆರೋಗ್ಯ ತಪಾಸಣೆ ಮಾಡಿಸಿಕೊಂಡರು.
--