ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಉಡುಪಿ

ಸಾಮೂಹಿಕ ಅತ್ಯಾಚಾರ ವಿಶೇಷ ತ್ವರಿತ ನ್ಯಾಯಾಲಯದಲ್ಲಿ ವಿಚಾರಣೆ: ಜಾರ್ಜ್

Mainashree
Updated On : 24 Jun 2013, 12:47 pm

ಉಡುಪಿ: ಮಣಿಪಾಲ ವೈದ್ಯಕೀಯ ವಿದ್ಯಾರ್ಥಿನಿಯ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ವಿಶೇಷ ತ್ವರಿತ ನ್ಯಾಯಾಲಯದ ಮೂಲಕ ವಿಚಾರಣೆ ನಡೆಸಲು ನಿರ್ಧರಿಸಲಾಗಿದೆ ಎಂದು ಪಶ್ಚಿಮ ವಲಯ ಗೃಹ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ. ಉಡುಪಿಗೆ ಭೇಟಿ ನೀಡಿದ ವೇಳೆ ಅವರು ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಇಂಥ ಘಟನೆಗಳಿಗೆ ಸಂಬಂಧಪಟ್ಟ ಹೊಸ ಕಾಯ್ದೆಯ ಪ್ರಕಾರ ಈ ಗ್ಯಾಂಗ್‌ರೇಪ್ ಪ್ರಕರಣವನ್ನು ತ್ವರಿತ ನ್ಯಾಯಾಲಯದಲ್ಲಿ ವಿಚಾರಣೆಗೊಳಪಡಿಸಲು ಅವಕಾಶ ಇದೆ. ಅದಕ್ಕೆ ಮೊದಲು ಈ ಬಗ್ಗೆ ರಾಜ್ಯ ಮುಖ್ಯ ನ್ಯಾಯಾಧೀಶರಲ್ಲಿ ಅನುಮತಿ ಪಡೆಯಬೇಕಾಗುತ್ತದೆ. ಆದ್ದರಿಂದ ಅನುಮತಿಗಾಗಿ ಮುಖ್ಯ ನ್ಯಾಯಾಧೀಶರಿಗೆ ಮನವಿ ಮಾಡಲಾಗುವುದು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement