ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಉಡುಪಿ

ಆಸ್ಕರ್ ಫೆರ್ನಾಂಡಿಸ್ ಮತದಾನ

Lingaraj Badiger
Updated On : 8 Mar 2013, 11:17 am

ಉಡುಪಿ: ರಾಜ್ಯಸಭಾ ಸದಸ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಆಸ್ಕರ್ ಅವರು ಗುರುವಾರ ಮುಂಜಾನೆ 6.30ಕ್ಕೆ ಅಂಬಲಪಾಡಿ ವಾರ್ಡ್‌ನ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಗೆ ಬಂದು ಕಾದು ನಿಂತು ಸರದಿಯಲ್ಲಿ 2ನೇಯವರಾಗಿ ಮತದಾನ ಮಾಡಿದರು. ಅವರಿಗಿಂತ ಮೊದಲು ಸರದಿಯಲ್ಲಿ ಮೊದಲನೇಯವರಾಗಿ ಅವರ ಪತ್ನಿ ಬ್ಲೋಸಂ ಮತದಾನ ಮಾಡಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಇದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ. ಅದರ ಹಿನ್ನೆಲೆಯಲ್ಲಿ ಉಡುಪಿಯಲ್ಲಿಯೂ ನಗರಸಭೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
----

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement