ಬಂಟಕಲ್ಲು: ವಿಶ್ವ ಮಹಿಳಾ ದಿನಾಚರಣೆ
ಉಡುಪಿ: ಶಿರ್ವ ಸಮೀಪದ ಬಂಟಕಲ್ಲಿನ ಅಂಗನವಾಡಿಯ ಬಾಲವಿಕಾಸ ಸಮನ್ವಯ ಸಮಿತಿ ಮತ್ತು ಶಿರ್ವ ರೋಟರಿ ಕ್ಲಬ್‌ಗಳ ಆಶ್ರಯದಲ್ಲಿ ಇತ್ತೀಚೆಗೆ ವಿಶ್ವ ಮಹಿಳಾ ದಿನಾಚರಣೆಯನ್ನು ನಡೆಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಉಡುಪಿ ಜಿಲ್ಲಾ ಪಂಚಾಯಿತಿ ಸದಸ್ಯೆ ಐಡಾ ಗಿಬ್ಬ ಡಿ' ಸೋಜ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಉಡುಪಿಯ ನ್ಯಾಯವಾದಿ ಅಮೃತಕಲಾ ಚಂದ್ರಶೇಖರ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಮಹಿಳಾ ಹಕ್ಕುಗಳು, ಕರ್ತವ್ಯ ಹಾಗೂ ಕಾನೂನು ರಕ್ಷಣೆಯ ಬಗ್ಗೆ ಮಾಹಿತಿ ನೀಡಿದರು.
ಮುಖ್ಯ ಅತಿಥಿಗಳಾಗಿ ಶಿರ್ವ ಗ್ರಾ.ಪಂ. ಉಪಾಧ್ಯಕ್ಷೆ ಶಾಲೆಟ್ ದೀಪಿಕಾ ಡಿ' ಸೋಜ, ಶಿರ್ವ ರೋಟರಿ ಅಧ್ಯಕ್ಷ ಮತಾಯಸ್ ಲೋಬೋ, ಕಾಪು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಳೆ, ಸ್ತ್ರೀಶಕ್ತಿ ಸಂಘದ ಅಧ್ಯಕ್ಷೆ ಮಲ್ಲಿಕಾ, ಗಾಯತ್ರಿ, ರೋಟರಿ ಕಾರ್ಯದರ್ಶಿ ಎಸ್. ಪಾಂಡುರಂಗ ಕಾಮತ್, ನಿಯೋಜಿತ ಅಧ್ಯಕ್ಷ ಲಿಯೊ ನೊರೋನ್ನಾ ಇದ್ದರು.
ಬಾಲವಿಕಾಸ ಸಮಿತಿಯ ಅಧ್ಯಕ್ಷ ಕೆ.ಆರ್. ಪಾಟ್ಕರ್ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿದರು. ಸಂಗೀತಾ ಪಾಟ್ಕರ್, ಸಂಧ್ಯಾ, ಸರಸ್ವತಿ ಸಹಕರಿಸಿದರು. ಈ ಸಂದರ್ಭದಲ್ಲಿ ಅಂಗನವಾಡಿ ಶಿಕ್ಷಕಿ ವಿನಯಾ ಅವರು ತಮ್ಮ ಹೆಣ್ಣು ಮಗುವಿನ ಜನ್ಮ ದಿನ ಪ್ರಯುಕ್ತ ಅಂಗನವಾಡಿ ಕೇಂದ್ರಕ್ಕೆ ಶುದ್ಧ ಕುಡಿಯುವ ನೀರಿನ ಫಿಲ್ಟರನ್ನು ನೀಡಿದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.