26 ಕೇಂದ್ರಗಳಲ್ಲಿ ಪ.ಪೂ. ಪರೀಕ್ಷೆ
ಉಡುಪಿ: ಜಿಲ್ಲೆಯಲ್ಲಿ ಬುಧವಾರ ದ್ವಿತೀಯ ಪಿಯು ಪರೀಕ್ಷೆಗಳು ಆರಂಭವಾಗಿವೆ. ಒಟ್ಟು 26 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದಿವೆ. ಮೊದಲ ದಿನ ಯಾವುದೇ ಪರೀಕ್ಷಾ ಅವ್ಯವಹಾರಗಳು ನಡೆದಿಲ್ಲ ಎಂದು ಪಿಯು ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್. ಎಸ್. ಶಿಂಧಾ ಅವರು ತಿಳಿಸಿದ್ದಾರೆ.
ಮೊದಲ ದಿನ ಬೆಳಿಗ್ಗೆ ನಡೆದ ಇತಿಹಾಸ ವಿಷಯದಲ್ಲಿ ಜಿಲ್ಲೆಯಲ್ಲಿ ಒಟ್ಟು 8186 ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕಾಗಿತ್ತು, ಆದರೆ 8058 ಮಂದಿ ಪರೀಕ್ಷೆಗೆ ಹಾಜರಾಗಿದ್ದು, 128 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.
ಮಧ್ಯಾಹ್ನ ನಡೆದ ಗಣಕ ವಿಜ್ಞಾನ ಪರೀಕ್ಷೆಯಲ್ಲಿ 2196 ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕಾಗಿತ್ತು, ಆದರೆ 2187 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 9 ಮಂದಿ ಗೈರು ಹಾಜರಾಗಿದ್ದಾರೆ.