ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಉಡುಪಿ

ಎಎಸ್‌ಐ ಕೃಷ್ಣಮೂರ್ತಿ ನಿವೃತ್ತಿ: ಬೀಳ್ಕೊಡುಗೆ

Lingaraj Badiger
Updated On : 14 Mar 2013, 11:53 am

ಉಡುಪಿ: ಪೊಲೀಸ್ ಇಲಾಖೆಯಲ್ಲಿ 35 ವರ್ಷಗಳಿಂದ ಸೇವೆ ಸಲ್ಲಿಸಿ, ಕಳೆದ ಒಂದೂವರೆ ವರ್ಷದಿಂದ ಜಿಲ್ಲಾ ಪೊಲೀಸ್ ಕೆಕ್ಕೇರಿಯ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಸೇವೆ ಸಲ್ಲಿಸಿ ಸ್ವಯಂ ನಿವೃತ್ತರಾದ ಕೃಷ್ಣಮೂರ್ತಿ ಅವರನ್ನು ಇತ್ತೀಚೆಗೆ ಪೊಲೀಸ್ ಕಚೇರಿಯಲ್ಲಿ ಬೀಳ್ಕೊಡಲಾಯಿತು.
ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಬೋರಲಿಂಗಯ್ಯ ಎಂ.ಬಿ. ಅವರು ನಿವೃತ್ತರಿಗೆ ಫಲಪುಷ್ಪ ಸ್ಮರಣಿಕೆ ನೀಡಿ ಸನ್ಮಾನಿಸಿದರು. ಈ ಸಮಾರಂಭದಲ್ಲಿ ಉಡುಪಿ ಉಪವಿಭಾಗದ ಉಪಾಧೀಕ್ಷಕ ಪ್ರಭುದೇವ್ ಬಿ. ಮಾನೆ ಹಾಗೂ ಸಹಾಯಕ ಆಡಳಿತ ಅಧಿಕಾರಿ ಚಂದ್ರಶೇಖರ ಶೆಟ್ಟಿ ಮುಖ್ಯ ಅತಿಥಿಗಳಾಗಿದ್ದರು. ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement