ಬೆಳಪಿನಲ್ಲಿ ಮನೆ ಮದ್ದು ಮಾಹಿತಿ ಕಾರ್ಯಕ್ರಮ
ಉಡುಪಿ: ಜಿ.ಪಂ.ನ ಆಯುಷ್ ಇಲಾಖೆ ಮತ್ತು ಬೆಳಪುವಿನ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯಗಳ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ಮನೆ ಮದ್ದು ಮಾಹಿತಿ ಕಾರ್ಯಕ್ರಮ ನಡೆಯಿತು. ಬೆಳಪು ಗ್ರಾಪಂ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಅವರು ಶಿಬಿರವನ್ನು ಉದ್ಘಾಟಿಸಿದರು. ಗ್ರಾ.ಪಂ. ಸದಸ್ಯರಾದ ವಿಮಲಾ ಅಂಚನ್ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಜಿಲ್ಲಾ ನೋಡಲ್ ಅಧಿಕಾರಿ ಡಾ. ಪ್ರಕಾಶ್ ನಾಯ್ಕ್ ಆಗಮಿಸಿ ಮನೆಮದ್ದು ಮಾಹಿತಿ ನೀಡಿದರು. ಬೆಳವು ಆಯುರ್ವೇದ ಚಿಕಿತ್ಸಾಲಯದ ವೈದ್ಯಾಧಿಕಾರಿ ಡಾ. ಜಿ. ಪೂರ್ಣಿಮಾ ಪೈ ನಿರೂಪಿಸಿದರು. ಫಲಿಮಾರು ಆಯುರ್ವೇದ ಚಿಕಿತ್ಸಾಲಯದ ವೈದ್ಯಾಧಿಕಾರಿ ಡಾ. ವೀಣಾ ನಾಯರ್ ಸಹಕರಿಸಿದರು.