ಮಂಜುನಾಥ ಉದ್ಯಾವರ ಪ್ರಶಸ್ತಿ ಪ್ರದಾನ
ಉದ್ಯಾವರ: ಇಲ್ಲಿನ ಉದ್ಯಾವರ ಫ್ರೆಂಡ್ಸ್ ಸರ್ಕಲ್ ವತಿಯಿಂದ ಸಾಂಸ್ಕೃತಿಕ- ಸಾಮಾಜಿಕವಾಗಿ ಮಹತ್ತರ ಸಾಧನೆ ಮಾಡಿದ್ದ ಉದ್ಯಾವರ ಮಂಜುನಾಥ್ ಅವರ ಹೆಸರಿನಲ್ಲಿ ಸ್ಥಾಪಿಸಲಾಗಿರುವ ಮಂಜುನಾಥ ಉದ್ಯಾವರ ಪ್ರಶಸ್ತಿ ಪ್ರದಾನ ಸಮಾರಂಭ ಶನಿವಾರ ಇಲ್ಲಿನ ಹಿಂದೂ ಶಾಲೆಯಲ್ಲಿ ನಡೆಯಿತು.
ಯಕ್ಷಗಾನ ಗುರು ಬನ್ನಂಜೆ ಸಂಜೀವ ಸುವರ್ಣ, ಯುವ ರಂಗಕರ್ಮಿ ಡಾ. ಶ್ರೀಪಾದ ಭಟ್, ಸಮಾಜ ಸೇವಕ ಡಾ. ಸುನಿಲ್ ಡಿ' ಸೋಜ, ಕ್ರೀಡಾ ತರಬೇತುದಾರ ಎಂ. ಚಂದ್ರಶೇಖರ ಹೆಗ್ಡೆ, ಶಿಕ್ಷಣ ತಜ್ಞ ಪ್ರೊ.ಎಚ್.ಎಸ್. ಉಮೇಶ್ ಮೈಸೂರು ಅವರಿಗೆ ಪ್ರಥಮ ಸಾಲಿನ ಪ್ರಶಸ್ತಿಗಳನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಆಸ್ಕರ್ ಫೆರ್ನಾಂಡಿಸ್ ಉದ್ಘಾಟಿಸಿದರು.
ಹಿರಿಯ ರಂಗಕರ್ಮಿ ಉದ್ಯಾವರ ಮಾಧವ ಆಚಾರ್ಯ ಮುಖ್ಯ ಅತಿಥಿಗಳಾಗಿದ್ದರು. ಉದ್ಯಮಿ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕ ಯು.ಆರ್. ಸಭಾಪತಿ, ತಾ.ಪಂ. ಸದಸ್ಯ ಗಿರೀಶ್ ಕುಮಾರ್ ಇದ್ದರು. ಸಂಸ್ಥೆಯ ಅಧ್ಯಕ್ಷ ಅನೂಪ್ ಕುಮಾರ್ ಸ್ವಾಗತಿಸಿದರು, ಪ್ರಶಸ್ತಿ ಆಯ್ಕೆ ಸಮಿತಿಯ ಸದಸ್ಯ ಉದ್ಯಾವರ ನಾಗೇಶ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಮೊದಲು ಪ್ರಶಸ್ತಿ ಪುರಸ್ಕೃತರನ್ನು ಸಾಂಸ್ಕೃತಿಕವಾಗಿ ವೈಭವಯುತವಾಗಿದ್ದ ಮೆರವಣಿಗೆಯಲ್ಲಿ ಉದ್ಯಾವರ ಪೇಟೆಯಿಂದ ವೇದಿಕೆಯವರೆಗೆ ಮೆರವಣಿಗೆಯಲ್ಲಿ ಕರೆ ತರಲಾಯಿತು. ಸಮಾರಂಭದ ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.