ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಉಡುಪಿ

ವಿಕಲಚೇತನ ಕ್ರೀಡಾಕೂಟ: ಉಡುಪಿ ಜಿಲ್ಲೆಯ 9 ಮಂದಿಗೆ ಪ್ರಶಸ್ತಿ

Mainashree
Updated On : 22 Mar 2013, 11:22 am

ಹೆಬ್ರಿ: ಬೆಂಗಳೂರಿನ ದೇವನಹಳ್ಳಿಯಲ್ಲಿ ಇತ್ತೀಚೆಗೆ ನಡೆದ ರಾಜ್ಯಮಟ್ಟದ ವಿಕಲಚೇತನ ಕ್ರೀಡಾಕೂಟದಲ್ಲಿ ಉಡುಪಿ ಜಿಲ್ಲೆಯ 9 ಮಂದಿ ವೈಯಕ್ತಿಕ ಪ್ರಶಸ್ತಿಯೊಂದಿಗೆ ಬಾಲಕಿಯರ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಹೆಮ್ಮಾಡಿ ಪ್ರಾಥಮಿಕ ಶಾಲೆಯ ರಮ್ಯ 3 ಸ್ಪರ್ಧೆಯಲ್ಲಿ ಪ್ರಥಮ ಪ್ರಶಸ್ತಿ, ಹಾಲಾಡಿಯ ಶ್ರೀಮತಿ, ಪೆರ್ವಾಜೆಯ ಸುನೀತಾ, ತಾರಾಪತಿಯ ಪಲ್ಲವಿ, ಬ್ರಹ್ಮಾವರದ ನಾಗೇಂದ್ರ, ಬೈಂದೂರಿನ ಶಿವನಾಗ ಪ್ರಶಸ್ತಿ ಪಡೆದಿದ್ದಾರೆ. ಪ್ರಶಸ್ತಿ ಪುರಸ್ಕೃತರ ತಂಡವನ್ನು ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಸೀತಾನದಿ ವಿಠಲ ಶೆಟ್ಟಿ, ತಂಡದ ವ್ಯವಸ್ಥಾಪಕ ಶಿವಾಜಿ, ಕೃಷ್ಣ, ಗಂಗೆ ಶ್ಯಾನುಭೋಗ್ ಅಭಿನಂದಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement