ಇಂದು ಕೊಂಕಣಿ ಸಾಂಸ್ಕೃತಿಕ ಸಾಹಿತ್ಯಿಕ ಸಮ್ಮೇಳನ
ಉಡುಪಿ: ಆಮ್ಗೆಲೆವಾಣಿ ಉಡುಪಿ ಸಂಸ್ಥೆಯ ವತಿಯಿಂದ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಪ್ರಾಯೋಜಕತ್ವದಲ್ಲಿ ಮೇ 11 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5.30ರವರೆಗೆ ಕೊಂಕಣಿ ಸಾಂಸ್ಕೃತಿಕ ಸಾಹಿತ್ಯಿಕ ಸಮ್ಮೇಳನವನ್ನು ಉಡುಪಿ ಪುತ್ತೂರಿನ ಶ್ರೀಲಕ್ಷ್ಮೀವೆಂಕಟೇಶ ದೇವಸ್ಥಾನದಲ್ಲಿ ಜರುಗಲಿದೆ ಎಂದು ಕೊಂಕಣಿ ಸಾಂಸ್ಕೃತಿಕ ಸಾಹಿತ್ಯಿಕ ಸಮ್ಮೇಳನದ ಟ್ರಸ್ಟಿ ಕೋಣಿ ಶೇಷಗಿರಿ ನಾಯಕ್ ಹೇಳಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಾಂಸ್ಕೃತಿಕ ಸಮ್ಮೇಳನವನ್ನು ಅಕಾಡೆಮಿ ಅಧ್ಯಕ್ಷ ಕಾಸರಗೋಡು ಚಿನ್ನಾ ಉದ್ಘಾಟಿಸಲಿದ್ದಾರೆ.
ಸಮಾರಂಭದ ಅಧ್ಯಕ್ಷತೆಯನ್ನು ದೇವಳದ ಆಡಳಿತ ಮೊಕ್ತೇಸರ ಪಿ. ವಸಂತ ಕೆ. ನಾಯಕ್ ವಹಿಸಲಿದ್ದಾರೆ ಎಂದು ಅವರು ಹೇಳಿದರು
ಸಮ್ಮೇಳನದಲ್ಲಿ ವಿದ್ಯಾರ್ಥಿ, ಯುವಜನ, ಮಹಿಳೆ ವಿಷಯಗಳ ಕುರಿತು ವಿಚಾರಗೋಷ್ಠಿಗಳು ಮತ್ತು ಸಾಂಸ್ಕೃತಿಕ ಮತ್ತು ಸಾಮಾಜಿಕವಾಗಿ ದುಡಿದ ಸಾಧಕರಿಗೆ ಸನ್ಮಾನ ನಡೆಯಲಿದೆ. ಸಮ್ಮೇಳನದಲ್ಲಿ ಸುಮಾರು 3000 ಜನರು ಭಾಗವಹಿಸುವ ನಿರೀಕ್ಷೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಕೊಂಕಣಿ ಸಾಂಸ್ಕೃತಿಕ ಸಾಹಿತ್ಯಿಕ ಸಮ್ಮೇಳನದ ಗೌರವಾಧ್ಯಕ್ಷ ಪಿ. ವಸಂತ್ ಕೆ. ನಾಯಕ್, ಟ್ರಸ್ಟಿಗಳಾದ ಕಮಲಾಕ್ಷ ಬಿ. ಶೇಟ್, ಮಾಧವ ಎಂ. ಶೇಟ್, ಗಣಪತಿ ಸಿ. ನಾಯಕ್, ಮೆನೇಜಿಂಗ್ ಟ್ರಸ್ಟಿ ದೀಪಕ್ ಎಂ. ಶೇಟ್ ಉಪಸ್ಥಿತರಿದ್ದರು.