ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಉಡುಪಿ

ಪ್ರತ್ಯೇಕ ಪ್ರಕರಣ: ಇಬ್ಬರು ಮದ್ಯವ್ಯಸನಿಗಳ ಆತ್ಮಹತ್ಯೆ

Lingaraj Badiger
Updated On : 16 May 2013, 12:11 pm

ಉಡುಪಿ: ಪ್ರತ್ಯೇಕ ಪ್ರಕರಣಗಳಲ್ಲಿ ಜಿಲ್ಲೆಯಲ್ಲಿ ಇಬ್ಬರು ಮದ್ಯವ್ಯಸನಿಗಳು ಮಂಗಳವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೈಂದೂರು ಹೆರಂಜಾಲು ಗ್ರಾಮದ ಆಶ್ರಯ ಕಾಲನಿಯಲ್ಲಿ ಮದ್ಯಪಾನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ. ವೆಂಕಟೇಶ (55) ಮೃತರು. ಇವರು ವೃತ್ತಿಯಲ್ಲಿ ಮೀನುಗಾರರಾಗಿದ್ದು, ವಿಪರೀತ ಮದ್ಯಪಾನದ ಚಟ ಹತ್ತಿಸಿಕೊಂಡಿದ್ದರು. ಈ ಹಿಂದೆಯೂ ಒಮ್ಮೆ ವಿಪರೀತ ಮದ್ಯ ಸೇವನೆ ಮಾಡಿಕೊಂಡು ನೇಣು ಹಾಕಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ್ದರು.  ಬುಧವಾರ ಮೀನುಗಾರಿಕೆಗೆ ರಜೆಯಾದ್ದರಿಂದ ವಿಪರೀತ ಮದ್ಯಸೇವನೆ ಮಾಡಿ ಮನೆಯಲ್ಲಿಯೇ ಇದ್ದರು. ನಂತರ ಸಂಜೆ ಮನೆಯ ಕಂಪೌಂಡಿನೊಳಗೆ ಇರುವ ಗೇರು ಮರಕ್ಕೆ ನೈಲಾನ್ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಅವರ ಮಗ ಜನಾರ್ದನ ಮೊಗವೀರ ನೀಡಿದ ದೂರಿನಂತೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವೃದ್ಧ ಆತ್ಮಹತ್ಯೆ: ಇನ್ನೊಂದು ಪ್ರಕರಣದಲ್ಲಿ ನಲ್ಲೂರು ಗ್ರಾಮದ ಮಂಜಲ್ತಾರ್ ಎಂಬಲ್ಲಿ ಮದ್ಯವ್ಯಸನಿ ವೃದ್ಧ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಶೀನ ದೇವಾಡಿಗ (80) ಮೃತರು. ಇವರು ವಿಪರೀತ ಶರಾಬು ಸೇವಿಸುವ ಚಟ ಹೊಂದಿದ್ದು, ಅದೇ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಆವರಣವಿಲ್ಲದ ಬಾವಿಯೊಳಗೆ ಬಾವಿಯ ಅಡ್ಡೆಗೆ ನೀರು ಸೇದುವ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಅವರ ಮಗ ನಿತ್ಯಾನಂದ ನೀಡಿದ ದೂರಿನಂತೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement