ವಿದ್ಯೋದಯ ಪಬ್ಲಿಕ್ ಸ್ಕೂಲ್ ಶೇ. 100 ಫಲಿತಾಂಶ
ಉಡುಪಿ: ಇಲ್ಲಿನ ವಿದ್ಯೋದಯ ಟ್ರಸ್ಟ್ನ ಅಂಗಸಂಸ್ಥೆಯಾದ ವಿದ್ಯೋದಯ ಪಬ್ಲಿಕ್ ಸ್ಕೂಲ್ (ಐ.ಸಿ.ಎಸ್.ಇ.) ಈ ಸಾಲಿನ 10ನೇ ತರಗತಿಯಲ್ಲಿ ಶೇ. 100 ಫಲಿತಾಂಶ ದಾಖಲಿಸಿದೆ. ಈ ಬಾರಿ 59 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅವರಲ್ಲಿ 21 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 37 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಒಬ್ಬ ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣಗೊಂಡಿರುತ್ತಾರೆ ಎಂದು ಶಾಲಾ ಪ್ರಾಂಶುಪಾಲ ಸುಧಾ ರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.