26ರಂದು ಗಂಗೊಳ್ಳಿ ಮಲ್ಯರಮಠದಲ್ಲಿ ಸಹಸ್ರ ಕುಂಭಾಭಿಷೇಕ
ಕುಂದಾಪುರ: ಪುರಾಣ ಪ್ರಸಿದ್ಧ ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಮೇ 26ರಂದು ಶ್ರೀ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ ಮಾರ್ಗದರ್ಶನದಲ್ಲಿ ನವಗ್ರಹ ವಾಸ್ತುಪೂರ್ವಕ ಸಹಸ್ರ ಕುಂಭಾಭಿಷೇಕ ಕಾರ್ಯಕ್ರಮ ನಡೆಯಲಿದೆ. ಮೇ 23ರಿಂದ ಸಹಸ್ರ ಕುಂಭಾಭಿಷೇಕದ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ವಿಧಿ ವಿಧಾನಗಳು ಆರಂಭಗೊಂಡಿದ್ದು, ಮೇ 29ರವರೆಗೆ ನಡೆಯಲಿದೆ.