ಕುಂದಾಪುರ: ನಿನಾದ ಸಂಸ್ಥೆ 8ನೇ ವಾರ್ಷಿಕೋತ್ಸವ
ಕುಂದಾಪುರ: ಗಂಗೊಳ್ಳಿಯ ನಿನಾದ ಸಂಸ್ಥೆಯ 8ನೇ ವಾರ್ಷಿಕೋತ್ಸವ ಸಮಾರಂಭ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಕಾರ್ಯಕ್ರಮ ಇತ್ತೀಚಿಗೆ ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಜರಗಿತು. ಶುಭಾಶಂಸನೆಗೈದು ಮಾತನಾಡಿದ ಉಡುಪಿಯ ಸ್ವರ್ಣೋದ್ಯಮಿ ಗುಜ್ಜಾಡಿ ಪ್ರಭಾಕರ ನಾಯಕ್, ನಿಸ್ವಾರ್ಥ ಮನೋಭಾವದಿಂದ ಮಾಡಿದ ಕಾರ್ಯವು ಸತ್ಫಲವನ್ನು ನೀಡುತ್ತದೆ. ಮುಂಬರುವ ದಿನಗಳಲ್ಲಿ ಸಂಸ್ಥೆಯು ವಿಶಿಷ್ಟವಾದ ಇನ್ನಷ್ಟು ಸಾಮಾಜಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಇನ್ನೂ ಹೆಚ್ಚಿನ ಯಶಸ್ಸು ಗಳಿಸಲಿ ಎಂದು ಹಾರೈಸಿದರು. ಸಮಾರಂಭದ ಅಧ್ಯಕ್ಷತೆಯನ್ನು ದೇವಳದ ಆಡಳಿತ ಮೊಕ್ತೇಸರ ಬೈಲೂರು ಮಂಜುನಾಥ ಶೆಣೈ ವಹಿಸಿದ್ದರು. ಇದೇ ಸಂದರ್ಭದಲ್ಲಿ ನಿವೃತ್ತ ಮುಖ್ಯ ಶಿಕ್ಷಕ ಸುರೇಶ ಕಾಮತ್ ಅವರನ್ನು ಸನ್ಮಾನಿಸಲಾಯಿತು. ಸಂಸ್ಥೆಯ ಅಧ್ಯಕ್ಷ ಎಂ. ಮುಕುಂದ ಪೈ ಸ್ವಾಗತಿಸಿದರು. ಕಾರ್ಯದರ್ಶಿ ಎನ್. ಗಜಾನನ ನಾಯಕ್ ವರದಿ ವಾಚಿಸಿದರು. ಕಾರ್ಯಕ್ರಮದ ಬಳಿಕ ಅಮೃತಾ ಅರವಿಂದ ಭಟ್ ಮಂಜೇಶ್ವರ ಅವರಿಂದ ಸಿತಾರ ವಾದನ ಕಾರ್ಯಕ್ರಮ ನಡೆಯಿತು.