ನಿಟ್ಟೆ: ಬೇಸಗೆ ಶಿಬಿರ ಸಮಾರೋಪ
ನಿಟ್ಟೆ: ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯ ಹಾಗೂ ಫೌಂಡೇಶನ್ ಫಾರ್ ಎಡ್ವಾನ್ಸ್ಮೆಂಟ್ ಆಫ್ ಎಜ್ಯುಕೇಶನ್ ಆಂಡ್ ರಿಸರ್ಚ್ ಜಂಟಿ ಸಹಯೋಗದೊಂದಿಗೆ ಉಡುಪಿ ಜಿಲ್ಲೆಯ ಗ್ರಾಮೀಣ ವಿದ್ಯಾರ್ಥಿಗಳಿಗಾಗಿ ಕಳೆದ ಏ.22ರಿಂದ ಆಯೋಜಿಸಲಾದ ತಾಂತ್ರಿಕತೆಯ ಅರಿವು ಮೂಡಿಸುವ ಬೇಸಗೆ ಶಿಬಿರದ ಸಮಾರೋಪ ಸಮಾರಂಭ ನಿಟ್ಟೆ ವಿದ್ಯಾಸಂಸ್ಥೆಯಲ್ಲಿ ನಡೆಯಿತು.
ಮುಖ್ಯ ಅತಿಥಿ, ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್. ನಾಗೇಂದ್ರ ಮಧ್ಯಸ್ಥ ಮಾತನಾಡಿ, ಸಾರ್ವಜನಿಕ ಶಿಕ್ಷಣ ಇಲಾಖೆ
'ಚೈತ್ರ ಚಿಗುರು' ಎನ್ನುವ ಇಂಥದ್ದೇ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಕಾರಣಾಂತರಗಳಿಂದ ಅದನ್ನು ನಿಲ್ಲಿಸಲಾಗಿದೆ. ಈಗ ಇಂತಹ ಕೆಲಸ ಖಾಸಗಿ ಸಂಸ್ಥೆಗಳು ಮಾಡುವುದು ಶ್ಲಾಘನೀಯ ಎಂದರು.
ಸಂಸ್ಥೆಯ ಪ್ರಾಂಶುಪಾಲ ಡಾ. ನಿರಂಜನ್ ಎನ್.ಚಿಪ್ಲೂಣ್ಕರ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಪ್ರಾಂಶುಪಾಲ ಶೇಖರ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಬಿರದ ಸಂಯೋಜಕ ಡಾ. ಸೀತಾರಾಮ ಶೆಟ್ಟಿಗಾರ್ ವರದಿವಾಚಿಸಿದರು.
ಪ್ರೊ. ವಿಶ್ವನಾಥ್ ಸ್ವಾಗತಿಸಿದರು. ಉಪನ್ಯಾಸಕ ರಾಘವೇಂದ್ರ ಬಾಯಿರಿ ವಂದಿಸಿದರು. ಶಿಬಿರದ ಅವಧಿಯಲ್ಲಿ ವಿವಿಧ ಸಾಂಸ್ಕೃತಿಕ ಹಾಗೂ ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆಯನ್ನು ಮಂಜುನಾಥ್ ನೆರವೇರಿಸಿದರು. ಶಿಬಿರಾರ್ಥಿಗಳಿಗೆ ಅರ್ಹತಾ ಪತ್ರದೊಂದಿಗೆ ರು. 500 ವಿದ್ಯಾರ್ಥಿ ವೇತನ ನೀಡಲಾಯಿತು.