ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಉಡುಪಿ

'ಪ್ರಾಕೃತಿಕ ವಿಕೋಪ' ಮುಂಜಾಗ್ರತಾ ಸಭೆ

Lingaraj Badiger
Updated On : 31 May 2013, 12:41 pm

ಮಣಿಪಾಲ: ಈ ಬಾರಿಯ ಮಳೆಗಾಲದಲ್ಲಿ ನೆರೆ ಹಾವಳಿಯ ಅನಾಹುತದ ಮಾಹಿತಿಯನ್ನು ತಕ್ಷಣ ಸಂಗ್ರಹಿಸುವುದಕ್ಕಾಗಿ ಆಯಾ ತಾಲೂಕಿನ ತಹಸೀಲ್ದಾರ್ ಕಚೇರಿ, ಸಹಾಯಕ ಕಮಿಷನರ್ ಕಚೇರಿ ಹಾಗೂ ನಗರಸಭೆ, ಪಟ್ಟಣ ಪಂಚಾಯಿತಿ ಮತ್ತು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ದಿನದ 24 ಗಂಟೆಗಳ ಕರ್ತವ್ಯ ನಿರ್ವಹಿಸುವ ಕಂಟ್ರೋಲ್ ರೂಮ್‌ಗಳನ್ನು ತೆರೆಯಲಾಗುತ್ತಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ಎಂ.ಟಿ. ರೇಜು ತಿಳಿಸಿದರು.
ಅವರು ಗುರುವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಪ್ರಾಕೃತಿಕ ವಿಕೋಪದ ಮುಂಜಾಗ್ರತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಳೆಗಾಲ ಪ್ರಾರಂಭವಾಗಿರುವುದರಿಂದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸ್ಥಾಪಿಸಿರುವ ಕಂಟ್ರೋಲ್ ರೂಂನಲ್ಲಿ ಕಾರ್ಯನಿರ್ವಹಿಸಲು ವಿವಿಧ ಇಲಾಖಾ ಅಧಿಕಾರಿಗಳನ್ನು ನೇಮಿಸಲಾಗಿದ್ದು, ಈ ಅಧಿಕಾರಿಗಳು ತಪ್ಪದೇ ಕಾರ್ಯನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಮಳೆಗಾಲದಲ್ಲಿ ಹರಡಬಹುದಾದ ಎಲ್ಲಾ ಕಾಯಿಲೆಗಳಿಗೆ ಬೇಕಾದ ಔಷಧ, ಚುಚ್ಚುಮದ್ದು ಇತ್ಯಾದಿಗಳು ಆರೋಗ್ಯ ಇಲಾಖೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಸಂಗ್ರಹ ಇದೆ. ಮಳೆಗಾಲ ಸಂದರ್ಭದಲ್ಲಿ ಮಲೇರಿಯಾ, ಡೆಂಘೀ ಅಪಾಯದ ಬಗ್ಗೆ ಜನರು ಎಚ್ಚರ ವಹಿಸಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಬಾಯರಿ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಎ. ಪ್ರಭಾಕರ ಶರ್ಮ, ಅಪರ ಜಿಲ್ಲಾಧಿಕಾರಿ ಕುಮಾರ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement