ಸುದ್ದಿ ಸಂಕ್ಷೇಪ
ಅಧಿಕಾರ ಸ್ವೀಕಾರ
ಉಡುಪಿ: ಉಡುಪಿ ಲೋಕಾಯುಕ್ತ ಠಾಣೆಯಲ್ಲಿ ಪ್ರಭಾರ ಕರ್ತವ್ಯದಲ್ಲಿದ್ದ ಪೊಲೀಸ್ ಉಪಾಧೀಕ್ಷಕ ಎಂ. ವಿಠಲದಾಸ್ ಪೈ ಅವರ ಸ್ಥಾನಕ್ಕೆ ಉಮೇಶ್ ಜಿ. ಶೇಟ್ ಪ್ರಭಾರ ಉಪಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಅವರು ಮೊದಲು ಮಂಗಳೂರು ಲೋಕಾಯುಕ್ತ ಇಲಾಖೆಯ ಉಪಾಧೀಕ್ಷಕರಾಗಿದ್ದರು.
ಲೋಕಾಯುಕ್ತ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ನಿರೀಕ್ಷಕ ಬಿ.ಪಿ. ದಿನೇಶ್ ಕುಮಾರ್ ಅವರು ಮಣಿಪಾಲ ಪೊಲೀಸ್ ಠಾಣೆಗೆ ವರ್ಗವಾಗಿದ್ದು, ತೆರವಾದ ಸ್ಥಾನಕ್ಕೆ ಮೋಹನ್ ಕೊಟ್ಟಾರಿ ಅ.31ರಂದು ಅಧಿಕಾರ ಸ್ವೀಕರಿಸಿದ್ದಾರೆ.