ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಉಡುಪಿ

ಬಿಜೆಪಿ ಮಹಿಳಾ ಮೋರ್ಚಾ ಪದಗ್ರಹಣ

Vishwanath S
Updated On : 5 Nov 2013, 11:41 am

ಉಡುಪಿ: ಜಿಲ್ಲೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಬಗ್ಗೆ ವಿಶೇಷ ಒಲವು ಎಲ್ಲಾ ವರ್ಗದಲ್ಲಿ ವ್ಯಕ್ತವಾಗುತ್ತಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗಡೆ ತಿಳಿಸಿದರು.
ಅವರು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಹಿಳಾ ಘಟಕವು ಹೆಚ್ಚು ಸಕ್ರಿಯವಾಗಿ ಮತದಾರರನ್ನು ತಲುಪುವ ಮೂಲಕ ಮಹಿಳೆಯರಲ್ಲಿ ನರೇಂದ್ರ ಮೋದಿ ಅವರನ್ನು ಪ್ರಧಾನಿ ಮಾಡುವ ಮತ್ತು ಕಾಂಗ್ರೆಸ್ ದುರಾಡಳಿತವನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ಸಜ್ಜುಗೊಳಿಸಲು ಕಾರ್ಯಾರಂಭ ಆಗಬೇಕು. ಈ ನಿಟ್ಟಿನಲ್ಲಿ ಜಿಲ್ಲಾ ಮಹಿಳಾ ಮೋರ್ಚಾ ನೂತನ ಅಧ್ಯಕ್ಷೆ ಪ್ರಯತ್ನಿಸಬೇಕು ಎಂದು ತಿಳಿಸಿದರು.
ಜಿಲ್ಲಾ ಮಹಿಳಾ ಮೋರ್ಚಾ ನೂತನ ಜಿಲ್ಲಾಧ್ಯಕ್ಷೆಯಾಗಿ ಹಿರಿಯ ನಾಯಕಿ ಶೀಲಾ ಕೆ. ಶೆಟ್ಟಿ ಅವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗಡೆ ಘೋಷಿಸಿದರು. ಮಹಿಳಾ ಮೋರ್ಚಾ ನಿರ್ಗಮನ ಅಧ್ಯಕ್ಷೆ ರೇಶ್ಮಾ ಶೆಟ್ಟಿ ಪಕ್ಷದ ಧ್ವಜ ನೀಡಿ ಶೀಲಾ ಕೆ. ಶೆಟ್ಟಿ ಯವರಿಗೆ ಅಧಿಕಾರ ಹಸ್ತಾಂತರಿಸಿದರು.
ನಂತರ ಶೀಲಾ ಕೆ. ಶೆಟ್ಟಿ ಮಾತನಾಡಿ, ಜಿಲ್ಲೆಯ ಎಲ್ಲಾ ಮಹಿಳಾ ಕಾರ್ಯಕರ್ತೆಯರ ಸಹಕಾರ ಮುಂದಿನ ದಿನಗಳಲ್ಲಿ ಬಯಸುತ್ತಾ ಶಕ್ತಿಶಾಲಿ ಮಹಿಳಾ ಘಟಕವನ್ನು ರೂಪಿಸುವ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ವಿನಂತಿಸಿದರು.
ರಾಜ್ಯ ಕಾರ್ಯದರ್ಶಿ ಶ್ಯಾಮಲಾ ಎಸ್. ಕುಂದರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಸಂಧ್ಯಾ ರಮೇಶ್, ಜಿಲ್ಲಾ ಉಪಾಧ್ಯಕ್ಷೆ ಗೀತಾಂಜಲಿ ಸುವರ್ಣ, ಜಿಲ್ಲಾ ಕಾರ್ಯದರ್ಶಿ ನಳಿನಿ ಪ್ರದೀಪ್ ರಾವ್, ಮಂಜುಳಾ ನಾಯಕ್ ಇದ್ದರು.
ಮಹಿಳಾ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸುಮಾ ಕೇಶವ್ ಸ್ವಾಗತಿಸಿ, ವೀಣಾ ಎಸ್. ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement