ಸೌಜನ್ಯಾ ಕೊಲೆ ಪ್ರಕರಣ ಸಿಬಿಐಗೆ ಒಪ್ಪಿಸಲು ಆಗ್ರಹಿಸಿ ನಾಳೆ ಪ್ರತಿಭಟನೆ
ಪುತ್ತೂರು: ಸೌಜನ್ಯ ಕೊಲೆ ಮತ್ತು ಅತ್ಯಾಚಾರ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಅಟೋ ಚಾಲಕ ಮಾಲೀಕರ ಸಂಘದ ವತಿಯಿಂದ 6ರಂದು ಪೂರ್ವಾಹ್ನ ಇಲ್ಲಿನ ಹೊಸ ಬಸ್ ನಿಲ್ದಾಣ ರಿಕ್ಷಾ ಪಾರ್ಕಿಂಗ್ನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ಪ್ರತಿಭಟನಾ ಸಭೆಯಲ್ಲಿ ಸಿಪಿಐಎಂ ದ.ಕ. ಜಿಲ್ಲಾ ಮುಖಂಡ ನ್ಯಾಯವಾದಿ ಬಿ.ಎಂ. ಭಟ್, ಡಿವೈಎಫ್ಐ ದ.ಕ. ಜಿಲ್ಲಾ ಸಮಿತಿ ಅಧ್ಯಕ್ಷ ಮುನೀರ್ ಕಾಟಿಪಳ್ಳ, ಕ್ಯಾಂಪಸ್ ಫ್ರೆಂಟ್ ಆಫ್ ಕರ್ನಾಟಕ ರಾಜ್ಯಾಧ್ಯಕ್ಷ ಕೆ. ಮಹಮ್ಮದ್ ಇಕ್ಬಾಲ್, ಸಾಹಿತಿ ಹಾಗೂ ಮಹಿಳಾ ಪರ ಹೋರಾಟಗಾರ್ತಿ ಅಮೃತಾ ಅತ್ರಾಡಿ, ಸೌಜನ್ಯ ಅವರ ತಂದೆ ಚಂದಪ್ಪ ಗೌಡ ಮತ್ತು ತಾಯಿ ಕುಸುಮಾವತಿ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.