ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಉಡುಪಿ

ಮಿಲಾಗ್ರಿಸ್ ಕಾಲೇಜಿನಲ್ಲಿ ಯುಜಿಸಿ- ಸಿಇಟಿ ಪರೀಕ್ಷೆ ತರಬೇತಿ

Mainashree
Updated On : 17 Nov 2013, 11:18 am

ಕಲ್ಯಾಣಪುರ: ಇಲ್ಲಿನ ಮಿಲಾಗ್ರಿಸ್ ಕಾಲೇಜಿನಲ್ಲಿ ಸ್ನಾತಕೋತ್ತರ ವಾಣಿಜ್ಯ ವಿಭಾಗ ಮತ್ತು ಸಮಾಜಕಾರ್ಯ ವಿಭಾಗದ ವತಿಯಿಂದ ಸ್ನಾತಕೋತ್ತರ ವಿದ್ಯಾರ್ಥಿಗಳು ಮತ್ತು ಪದವೀಧರರಿಗೆ ಇತ್ತೀಚೆಗೆ 2 ದಿನಗಳ ಯುಜಿಸಿ- ಎನ್‌ಇಟಿ ಮತ್ತು ಕೆ-ಸಿಇಟಿ ಪರೀಕ್ಷೆ ತಯಾರಿಯ ಬಗ್ಗೆ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.   ಕಾಲೇಜಿನ ಪ್ರಾಂಶುಪಾಲರಾದ ಡಾ. ನೇರಿ ಕರ್ನೇಲಿಯೊ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ದ.ಕ ಜಿಲ್ಲೆಯ ಬಂಟ್ವಾಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಮನೋಜ್ ಲೂಯಿಸ್ ಕಾರ್ಯಕ್ರಮ ಉದ್ಘಾಟಿಸಿದರು. ಮಿಲಾಗ್ರಿಸ್ ಕಾಲೇಜಿನ ಸ್ನಾತಕೋತ್ತರ ವಾಣಿಜ್ಯ ವಿಭಾಗದ ಸಂಘಟಕರಾದ ಡಾ. ಹೆರಾಲ್ಡ್ ಮೋನಿಸ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಮನೋಜ್ ಲೂಯಿಸ್, ಮಂಗಳೂರಿನ ಶ್ರೀನಿವಾಸ ಕಾಲೇಜಿನ ಎಂಬಿಎ ವಿಭಾಗದ ಸಹಾಯಕ ಪ್ರಾಧ್ಯಾಪಕ ಸ್ಟೀವನ್ ಟೆಲ್ಲೀಸ್, ಬಾರ್ಕೂರು ಸರ್ಕಾರಿ ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸಂಧ್ಯಾ ಎಂ. ವಿದ್ಯಾರ್ಥಿಗಳಿಗೆ ತರಬೇತಿ ನೀಡಿದರು. ವಿವಿಧ ಕಾಲೇಜುಗಳ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement