ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಉಡುಪಿ

ಮೋದಿಗೆ ಇತಿಹಾಸ ತಿಳಿದಿಲ್ಲ: ಬಿ. ನರಸಿಂಹಮೂರ್ತಿ ಲೇವಡಿ

Lingaraj Badiger
Updated On : 21 Nov 2013, 12:20 pm

ಉಡುಪಿ: ಇತಿಹಾಸವನ್ನೇ ತಿರುಚಿ ನಮ್ಮ ದೇಶದಲ್ಲಿ ಮಾಹಿತಿ ತಂತ್ರಜ್ಞಾನದ ಅಭಿವೃದ್ಧಿಗೆ ಮಾಜಿ ಪ್ರಧಾನಿ ವಾಜಪೇಯಿ ಕಾರಣ ಎನ್ನುವ ಮೂಲಕ ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ನಡೆದ ರ್ಯಾಲಿಯಲ್ಲಿ ತಮ್ಮ ಅಜ್ಞಾನವನ್ನು ಜಾಹೀರುಗೊಳಿಸಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿ. ನರಸಿಂಹಮೂರ್ತಿ ಲೇವಡಿ ಮಾಡಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಭಾರತ ದೇಶವನ್ನು ಮುನ್ನಡೆಸಬೇಕಾದರೆ ಮಾಹಿತಿ ತಂತ್ರಜ್ಞಾನ ಅಭಿವದ್ಧಿಗೊಳಿಸಿದರೆ ಮಾತ್ರ ಸಾಧ್ಯ ಎಂದು ಮನಗಂಡ ಮಾಜಿ ಪ್ರಧಾನಿ ದಿವಂಗತ ರಾಜೀವ ಗಾಂಧಿ ಅವರು ತಮ್ಮ ಅಧಿಕಾರಾವಧಿಯಲ್ಲಿ ಮಾಹಿತಿ ತಂತ್ರಜ್ಞಾನದಲ್ಲಿ ಬಹಳಷ್ಟು ಸಾಧನೆ ಮಾಡಿ ವಿದೇಶದಲ್ಲಿ ನೆಲೆಸಿದ್ದ ಸ್ಯಾಮ್ ಪತ್ರೋಡ ಅವರನ್ನು ಭಾರತಕ್ಕೆ ಬರಮಾಡಿಕೊಂಡು, ಅವರಿಗೆ ಉತ್ತೇಜನ ನೀಡಿದರು. ಪಿತ್ರೋಡ ಅವರ ಸಂಶೋಧನೆಯ ಫಲವಾಗಿ ಇಂದು ನಮ್ಮ ದೇಶ ಮಾಹಿತಿ ತಂತ್ರಜ್ಞಾನದಲ್ಲಿ ಪ್ರತಿಷ್ಠೆಯ ಸ್ಥಾನಗಳಿಸಲು ಸಾಧ್ಯವಾಯಿತು. ಇದು ಇತಿಹಾಸ. ಆದರೆ ಈ ಇತಿಹಾಸ ನರೇಂದ್ರ ಮೋದಿ ಅವರಿಗೆ ಗೊತ್ತಿಲ್ಲದಿರುವುದು ವಿಪರ್ಯಾಸ ಎಂದವರು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ಟೀಕಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement