ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಉಡುಪಿ

ಶಿವಪುರ: ಸಹಕಾರ ಸಪ್ತಾಹ ಸಮಾರೋಪ

Lingaraj Badiger
Updated On : 22 Nov 2013, 12:42 pm

ಹೆಬ್ರಿ: ಹಳ್ಳಿಗಳಲ್ಲಿ ಸಹಕಾರ ಸಂಸ್ಕೃತಿ ಮತ್ತು ಮೌಲ್ಯಗಳು ಇಂದು ಮನೆ ಮಾಡಿಕೊಂಡಿವೆ. ಹಳ್ಳಿಯ ಜನರ ಸಹಕಾರಿ ಮನೋಭಾವದೊಂದಿಗೆ ಗುಣಮಟ್ಟ ಮತ್ತು ಶಿಸ್ತಿಗೆ ಪ್ರಾಮುಖ್ಯತೆ ನೀಡಿ ಪ್ರಮಾಣಿಕ ಪರಿಶ್ರಮದ ಫಲವಾಗಿ ಸಹಕಾರಿ ರಂಗ ಅಭಿವೃದ್ದಿ ಹೊಂದಲು ಸಹಾಯವಾಗಿದೆ ಎಂದು ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ರವಿರಾಜ ಹೆಗ್ಡೆ ಹೇಳಿದರು.
ಅವರು ಬುಧವಾರ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಹಾಗೂ ಶಿವಪುರ ಹಾಲು ಉತ್ಪಾದಕರ ಸಹಕಾರಿ ಸಂಘದ ವತಿಯಿಂದ ಶಿವಪುರ ಸಹಕಾರಿ ಸಂಘದ ವಠಾರದಲ್ಲಿ ನಡೆದ 60ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಸಹಕಾರ ಸಂಸ್ಕೃತಿ ಮತ್ತು ಮೌಲ್ಯಗಳ ಉತ್ತೇಜನ ದಿನವಾಗಿ ಸಹಕಾರ
ಸಪ್ತಾಹದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಸಮಾರಂಭದಲ್ಲಿ  ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಕಿಶನ್ ಹೆಗ್ಡೆ ಕೊಳಕ್ಕೆ ಬೈಲು ಮಾತನಾಡಿ, ಸಹಕಾರ ಬದ್ಧತೆಗೆ 100 ವರ್ಷವಾದರೂ ಸಹಕಾರ ಸಪ್ತಾಹ ಎಂಬ ಕಲ್ಪನೆಗೆ 60 ವರ್ಷ ತುಂಬಿದ ಸಂಭ್ರಮದಲ್ಲಿ ನಾವಿದ್ದೇವೆ. ಸೇವೆ ಮಾತ್ರ ಸಹಕಾರ ಅಲ್ಲ, ಲಾಭಾಂಶ ಸಹಿತ ಸೇವೆ ನೀಡಿದಾಗ ಸಹಕಾರ ತತ್ವಕ್ಕೆ ನಿಜವಾದ ಅರ್ಥ ಬರುತ್ತದೆ ಎಂದರು.
ಹಾಲು ಉತ್ಪಾದಕರ ಒಕ್ಕೂಟದ ನಿವೃತ್ತ ವ್ಯವಸ್ಥಾಪಕ ಡಿ.ಎಸ್. ಹೆಗ್ಡೆ ಸಮಾರಂಭದಲ್ಲಿ ಸನ್ಮಾನವನ್ನು ಸ್ವೀಕರಿಸಿ, ಮಾತನಾಡಿದರು.
ಪಠ್ಯದಲ್ಲಿ ಸಹಕಾರ ತತ್ವ ಅಳವಡಿಸಿ: ಸಹಕಾರ ತತ್ವದ ಮೂಲಕ ಇಂದು ಹಳ್ಳಿಯ ಮೂಲೇ ಮೂಲೆಗಳಲ್ಲಿ ಸ್ವಾವಲಂಭಿ ಬದುಕು ಸಾಗಿಸುತ್ತಿದ್ದಾರೆ. ಅಂತಹ ತತ್ವವನ್ನು ಸರ್ಕಾರ ಪಠ್ಯ ಪುಸ್ತಕದಲ್ಲಿ ಅಳವಡಿಸುವ ಯೋಚನೆ ಮಾಡಬೇಕಾಗಿದೆ ಎಂದು ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶಿವಪುರ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ  ಸುರೇಶ ಶೆಟ್ಟಿ  ಹೇಳಿದರು. ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕರಾದ ನೀರೆ ಕೃಷ್ಣ ಶೆಟ್ಟಿ, ವಿಜಯಲಕ್ಷ್ಮೀ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್‌ನ ನಿರ್ದೇಶಕ, ಹೆಬ್ರಿ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕರುಣಾಕರ ಶೆಟ್ಟಿ, ಜಿಲ್ಲಾ ಸಹಕಾರಿ ಯೂನಿಯನ್‌ನ ಕೋಶಾಕಾಧಿರಿ ಇಂದ್ರಾಳಿ ಜಯಕರ ಶೆಟ್ಟಿ, ಉಪಾಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ , ಉಪವ್ಯವಸ್ಥಾಪಕ ಡಾ. ಅನಿಲ್ ಕುಮಾರ್ ಶೆಟ್ಟಿ, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಬಿ. ಸತ್ಯನಾರಾಯಣ ಇದ್ದರು. ಸಂಘದ ಕಾರ್ಯದರ್ಶಿ ಇಂದಿರಾ ಸ್ವಾಗತಿಸಿ, ಶಂಕರ್ ನಾಯ್ಕ ಕಾರ್ಯಕ್ರಮ ನಿರೂಪಿಸಿ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್‌ನ ಕಾರ್ಯನಿರ್ವಹಣಾಧಿಕಾರಿ ಎಚ್.ಬಿ. ಜಗದೀಶ್ ವಂದಿಸಿದರು.
ಸಂಘದ ನೂತನ ಕಟ್ಟಡ ಶಿವಹಾಸಂನ ವಾರ್ಷಿಕ ದಿನಾಚರಣೆಯ ಪ್ರಯುಕ್ತ ಬೆಳಗ್ಗೆ 8ರಿಂದ ಧಾರ್ಮಿಕ ಕಾರ್ಯಕ್ರಮ, ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement