ರಾಜ್ಯಮಟ್ಟದ ನಾಟಕ ಸ್ಪರ್ಧೆ ಉದ್ಘಾಟನೆ
ಉಡುಪಿ: ರಂಗಭೂಮಿ ಸಮಾಜಕ್ಕೆ ಉತ್ತಮ ಸಂದೇಶ ಕೊಡುವ ನಿಟ್ಟಿನಲ್ಲಿ ದುಡಿದು ಸಮಾಜದಲ್ಲಿರುವ ಅಂಕುಡೊಂಕುಗಳನ್ನು ನಿವಾರಿಸುವಲ್ಲಿ ಪ್ರಮುಖ ಪಾತ್ರ ವಹಿಸಿಬೇಕು ಎಂದು ಎಂ.ಜಿ.ಎಂ. ಕಾಲೇಜಿನ ಪ್ರಾಂಶುಪಾಲ ಪ್ರೊ. ಹಾಲಾ ನೈಕ್ ನುಡಿದರು. ಅವರು ಇಲ್ಲಿನ ನೂತನ ರವೀಂದ್ರ ಮಂಟಪದಲ್ಲಿ ಉಡುಪಿಯ ರಂಗಭೂಮಿ ಹಮ್ಮಿಕೊಂಡಿರುವ 34ನೇ ರಾಜ್ಯ ಮಟ್ಟದ ಕನ್ನಡ ನಾಟಕ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿ ರಂಗಭೂಮಿ ಬಗ್ಗೆ ಚಿಂತಿಸುವವರ, ಕಲಾವಿದರ ಸಂಖ್ಯೆ ಹೆಚ್ಚಾಗಬೇಕು ಎಂದರು. ಸಂಸ್ಥೆಯ ಗೌರವಾಧ್ಯಕ್ಷ ಡಾ.ಎಚ್. ಶಾಂತರಾಮ್ ಅಧ್ಯಕ್ಷತೆ ವಹಿಸಿದ್ದರು. ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ, ಯು. ಉಪೇಂದ್ರ, ಯು. ದಾಮೋದರ ಇದ್ದರು. ಪಿ. ವಾಸುದೇವ ರಾವ್ ಸ್ವಾಗತಿಸಿ ರವಿರಾಜ್ ನಿರೂಪಿಸಿದರು.