ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಉಡುಪಿ

ನಾಳೆ ಜಿಲ್ಲಾ ಬಿಜೆಪಿ ಪದಗ್ರಹಣ, ಕಾರ್ಯಕರ್ತರ ಸಮಾವೇಶ

Lingaraj Badiger
Updated On : 8 Oct 2013, 12:03 pm

ಉಡುಪಿ: ಜಿಲ್ಲಾ ಬಿಜೆಪಿಯ ನೂತನ ಪದಾಧಿಕಾರಿಗಳ ಪ್ರದಗ್ರಹಣ ಕಾರ್ಯಕ್ರಮ ಹಾಗೂ ಜಿಲ್ಲಾ ಕಾರ್ಯಕರ್ತರ ಸಮಾವೇಶ ಅ.9ರಂದು ಮಧ್ಯಾಹ್ನ 3 ಗಂಟೆಗೆ ಇಲ್ಲಿನ ಶೇಷಶಯನ ಸಭಾಂಗಣದಲ್ಲಿ ನಡೆಯಲಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ಭಾಗವಹಿಸಲಿದ್ದಾರೆ ಎಂದು ನಿರ್ಗಮನ ಜಿಲ್ಲಾಧ್ಯಕ್ಷ ಉದಯಕುಮಾರ್ ಶೆಟ್ಟಿ ತಿಳಿಸಿದ್ದಾರೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ರಾಜ್ಯ ಕಾರ್ಯದರ್ಶಿ ಸಿ.ಟಿ. ರವಿ, ಸಂಸದ ನಳಿನ್ ಕುಮಾರ್, ರಾಜ್ಯ ಸಂಘಟನಾ ಕಾರ್ಯದರ್ಶಿ ಸಂತೋಷ್, ಶಾಸಕ ಮೋನಪ್ಪ ಭಂಡಾರಿ, ರಾಜ್ಯ ಉಪಾಧ್ಯಕ್ಷ ಸುನಿಲ್ ಕುಮಾರ್ ಪಾಲ್ಗೊಳ್ಳಲಿದ್ದಾರೆ ಎಂದರು.
ಕಾರ್ಯಕ್ರಮಕ್ಕೆ ಮೊದಲು ನಗರದ ಜೋಡುಕಟ್ಟೆಯಿಂದ ಪ್ರಹ್ಲಾದ್ ಜೋಷಿ ಅವರನ್ನು ಮೆರವಣಿಗೆ ಮೂಲಕ ಸ್ವಾಗತಿಸಲಾಗುವುದು ಎಂದು ಉದಯ ಕುಮಾರ್ ಹೇಳಿದರು.  ನೂತನ ಅಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ ನೂತನ ಪದಾಧಿಕಾರಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದರು. ರವಿ ಅಮೀನ್, ವಿಲಾಸ್ ನಾಯಕ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement