ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಉಡುಪಿ

ಗಂಗೊಳ್ಳಿ ಪೊಲೀಸ್ ಠಾಣೆಗೆ ಸಿಬ್ಬಂದಿ ನಿಯೋಜನೆ: ಡಿವೈಎಸ್ಪಿ

Lingaraj Badiger
Updated On : 11 Oct 2013, 11:46 am

ಗಂಗೊಳ್ಳಿ: ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಖಾಲಿ ಇರುವ ಪೊಲೀಸ್ ಸಿಬ್ಬಂದಿ ಹುದ್ದೆ ಭರ್ತಿಗೆ ಹಾಗೂ ಅನ್ಯ ಕಾರ್ಯ ನಿಮಿತ್ತ ಬೇರೆ ಕಡೆಗೆ ನಿಯೋಜನೆಗೊಂಡಿರುವ ಪೊಲೀಸ್ ಸಿಬ್ಬಂದಿಯನ್ನು ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುವಂತೆ ಮಾಡಲು ಅಗತ್ಯ ಕ್ರಮಕೈಗೊಳ್ಳುವುದಾಗಿ ಕುಂದಾಪುರ ಡಿವೈಎಸ್ಪಿ ಸಿ.ಬಿ.ಪಾಟೀಲ್ ಹೇಳಿದ್ದಾರೆ.
 ಗುರುವಾರ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಗಂಗೊಳ್ಳಿ ಅತಿ ಸೂಕ್ಷ್ಮ ಪ್ರದೇಶವಾಗಿದ್ದು, ಕೆಲವೊಂದು ಅಹಿತಕರ ಘಟನೆ ನಡೆಯುತ್ತಿರುತ್ತದೆ. ಆದ್ದರಿಂದ ಗಂಗೊಳ್ಳಿಯಲ್ಲಿ ಸದಾ ಶಾಂತಿ ಸುವ್ಯವಸ್ಥೆ ಕಾಪಾಡಲು ಮತ್ತು ಜನರ ಸಮಸ್ಯೆಗಳಿಗೆ ತುರ್ತಾಗಿ ಸ್ಪಂದಿಸಲು ಅಗತ್ಯ ಪೊಲೀಸ್ ಬಲ ಬೇಕಾಗಿದೆ.
  ಹೀಗಾಗಿ ಗಂಗೊಳ್ಳಿಯಲ್ಲಿ ಪೂರ್ಣ ಪ್ರಮಾಣದ ಪೊಲೀಸ್ ಹೊರಠಾಣೆ ಹಾಗೂ ಗಂಗೊಳ್ಳಿಗೆ ಪೊಲೀಸ್ ವಾಹನ ನೀಡುವ ಬಗ್ಗೆ ಪ್ರಯತ್ನಿಸುವುದಾಗಿ ಅವರು ಹೇಳಿದರು.  
 ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕ ಸಂಪತ್ ಕುಮಾರ್ ಈ ಸಂದರ್ಭ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement