ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಉಡುಪಿ

ಭಟ್ಕಳದಲ್ಲಿ ಗುಂಪು ಘರ್ಷಣೆ

Srinivasa Murthy VN
Updated On : 20 Oct 2013, 10:38 am

-ಪರಿಸ್ಥಿತಿಯನ್ನು ನಿಯಂತ್ರಿಸಿದ ಪೊಲೀಸರು
-ಶಾಂತಿ ಕದಡುವರ ವಿರುದ್ಧ ಕ್ರಮ: ಶಾಸಕ ವೈದ್ಯ
ಭಟ್ಕಳ: ಶೌಚಾಲಯಕ್ಕೆ ಬರುವ ಮಹಿಳೆಯರ ಕೀಟಲೆ ಮಾಡುತ್ತಿದ್ದ ಯುವಕರನ್ನು ಪ್ರಶ್ನಿಸಲು ಹೋದ ಯುವಕರ ಮೇಲೆ ಗುಂಪೊಂದು ಹಲ್ಲೆ ನಡೆಸಿದ ಪರಿಣಾಮ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದ ಘಟನೆ ಶನಿವಾರ ರಾತ್ರಿ ನಡೆದಿದೆ.
ನಗರ ಠಾಣಾ ಪೊಲೀಸರ ಸಮಯಪ್ರಜ್ಞೆಯಿಂದಾಗಿ ಆಗಬಹುದಾಗಿದ್ದ ಭಾರಿ ಘರ್ಷಣೆ ತಪ್ಪಿದೆ. ಶನಿವಾರ ರಾತ್ರಿ ನಗರದ ಆಸರಕೇರಿಯಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದು ಪರಿಸ್ಥಿತಿ ವಿಕೋಪಕ್ಕೆ ಹೋಗಿತ್ತು. ಇದನ್ನರಿತ ಸಿಪಿಐ ಕೆ.ಯು. ಬೆಳ್ಳಿಯಪ್ಪ ಹೆಚ್ಚಿನ ಪೊಲೀಸ್ ಪಡೆಯೊಂದಿಗೆ ಸ್ಥಳಕ್ಕಾಗಮಿಸಿ ಎರಡೂ ಗುಂಪನ್ನೂ ಚದುರಿಸಿ ವಿಶೇಷ ಬಂದೋಬಸ್ತ್ ಒದಗಿಸುವುದರ ಮೂಲಕ ವಾತಾವರಣವನ್ನು ತಿಳಿಗೊಳಿಸಿದ್ದಾರೆ. ಸುದ್ದಿ ತಿಳಿದ ಎಸ್ಪಿ ಸುಧೀರಕುಮಾರ ರೆಡ್ಡಿ ಸ್ಥಳಕ್ಕೆ ಆಗಮಿಸಿ ಎರಡೂ ಕೋಮಿನ ಮುಖಂಡರೊಂದಿಗೆ ಮಾತುಕತೆ ನಡೆಸಿ ಪರಸ್ಪರ ಶಾಂತಿ ಕಾಪಾಡುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ವಾತಾವರಣ ತಿಳಿಗೊಂಡಿದೆ. ಈ ಘಟನೆಗೆ ಸಂಬಂಧಿಸಿದಂತೆ ನಗರ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ. ಜಿಲ್ಲಾಧಿಕಾರಿ ಇಂಕ್ಲಾಂಗೋ ಜಮೀರ್, ಜಿಲ್ಲಾ ಎಸ್ಪಿ ಆರ್. ದಿಲೀಪ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಭಟ್ಕಳ ಎರಡು ಕೋಮಿನ ಸಭೆಯನ್ನು ಶಾಸಕ ಮಂಕಾಳ ವೈದ್ಯ ಅವರ ಅಧ್ಯಕ್ಷತೆಯಲ್ಲಿ ಕರೆದು ಪರಸ್ಪರ ಶಾಂತಿ ಕಾಪಾಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿ, ಶಾಂತಿ ಕದಡಿಸುವವರು ಯಾರೆ ಇರಲಿ ಅವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ ಎಂದು ಪೊಲೀಸರಿಗೆ ಆದೇಶ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement