17ರಂದು ಹೆಬ್ರಿ ಸುತ್ತ ವಿದ್ಯುತ್ ಕಡಿತ
ಉಡುಪಿ: ಹಿರಿಯಡ್ಕ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಹೆಬ್ರಿ ವಿದ್ಯುತ್ ಮಾರ್ಗದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ 17ರಂದು ಬೆಳಗ್ಗೆ 9.30ರಿಂದ ಸಂಜೆ 5.00 ಗಂಟೆವರೆಗೆ ಕೆಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಹೆಬ್ರಿ, ಶಿವಪುರ, ಖಜಾನೆ, ಮುದ್ರಾಡಿ, ಮುನಿಯಾಲು, ವಾರಂಗ, ಬಚ್ಚಪ್ಪು, ಕಬ್ಬಿನಾಲೆ, ಸೀತಾನದಿ, ಸೋಮೇಶ್ವರ, ನಾಡ್ಸಾಲು, ಬೆಳಂಜೆ, ಮಡಾಮಕ್ಕಿ, ಕಳ್ತೂರು, ಸಂತೆಕಟ್ಟೆ, ಕರ್ಜೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಕಡಿತಗೊಳಿಸಲಾಗುವುದು. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.