ಉಪಾಧ್ಯಕ್ಷ ಸ್ಥಾನ ಸೆಲಿನ್ಗೆ ನೀಡಲು ಆಗ್ರಹ
ಉಡುಪಿ: ಉಡುಪಿ ನಗರಸಭೆಯ ಉಪಾಧ್ಯಕ್ಷ ಸ್ಥಾನಕ್ಕೆ ಮಹಿಳಾ ಮೀಸಲು ಘೋಷಣೆಯಾಗಿದ್ದು, ಕ್ರೈಸ್ತ ಸಮುದಾಯಕ್ಕೆ ಪ್ರಾತಿನಿಧ್ಯ ನೀಡುವ ಹಿನ್ನೆಲೆಯಲ್ಲಿ ನಗರಸಭೆಯ ಸದಸ್ಯೆ ಸೆಲಿನ್ ಕರ್ಕಡ ಅವರನ್ನು ಉಪಾಧ್ಯಕ್ಷೆಯನ್ನಾಗಿ ಆರಿಸಬೇಕು ಎಂದು ಕರ್ನಾಟಕ ರಾಜ್ಯ ಕ್ರೈಸ್ತ ಸಂಘಗಳ ಅಂತಾರಾಷ್ಟ್ರೀಯ ಒಕ್ಕೂಟದ ಅಧ್ಯಕ್ಷ ಲೂವಿಸ್ ಲೋಬೊ ನಗರಸಭೆಯ ಆಡಳಿತಾರೂಢ ಕಾಂಗ್ರೆಸ್ ಪಕ್ಷವನ್ನು ಆಗ್ರಹಿಸಿದ್ದಾರೆ.10 ವರ್ಷಗಳ ಹಿಂದೆ ರೊನಾಲ್ಡ್ ಪ್ರವೀಣ್ ಕುಮಾರ್ ನಗರಸಭೆಯ ಉಪಾಧ್ಯಕ್ಷರಾದ ಮೇಲೆ ಕ್ರೈಸ್ತ ಸಮುದಾಯದ ಯಾವುದೇ ಸದಸ್ಯ ಅಧ್ಯಕ್ಷ ಅಥವಾ ಉಪಾಧ್ಯಕ್ಷ ಆಗಿಲ್ಲ. ನಗರಸಭೆಗ ನಾಮನಿರ್ದೇಶನ ಸದಸ್ಯರನ್ನು ಆರಿಸುವಾಗಲೂ ಕ್ರೈಸ್ತ ಸಮುದಾಯದ ಸದಸ್ಯರನ್ನು ಕಡೆಗಣಿಸಲಾಗಿದೆ. ಆದ್ದರಿಂದ ಈ ಬಾರಿಯಾದರೂ ಕ್ರೈಸ್ತ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಿ ಸೆಲಿನ್ ಕರ್ಕಡ ಅವರನ್ನು ಉಪಾಧ್ಯಕ್ಷರನ್ನಾಗಿ ಆರಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಗುರುವಾರ ಉಡುಪಿ ನಗರಸಭೆಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಅಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಜಾತಿ ಮತ್ತು ಉಪಾಧ್ಯಕ್ಷೆ ಸ್ಥಾನಕ್ಕೆ ಮಹಿಳಾ ಮೀಸಲಾತಿ ಘೋಷಿಸಲಾಗಿದೆ.