ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಉಡುಪಿ

ಕಾರ್ಕಳ: ಪುರಸಭೆ ಅಧ್ಯಕ್ಷೆ ರೆಹಮತ್, ಉಪಾಧ್ಯಕ್ಷೆ ಶಶಿಕಲಾ

Lingaraj Badiger
Updated On : 17 Sept 2013, 12:07 pm

ಕಾರ್ಕಳ: ಇಲ್ಲಿನ ಪುರಸಭೆಗೆ ಸೋಮವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ನ ರೆಹಮತ್ ಅಧ್ಯಕ್ಷೆಯಾಗಿ ಆಯ್ಕೆಗೊಂಡಿದ್ದು, ಅವಿರೋಧವಾಗಿ ಬಿಜೆಪಿಯ ಶಶಿಕಲಾ ಉಪಾಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ.
23 ಸದಸ್ಯ ಬಲದ ಪುರಸಭೆಯಲ್ಲಿ ಕಾಂಗ್ರೆಸ್ 12 ಹಾಗೂ ಬಿಜೆಪಿ 11 ಸ್ಥಾನ ಹೊಂದಿದೆ. ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗಾಗಿ ಹಾಗೂ ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿಗೆ ಮೀಸಲಾಗಿತ್ತು. ಕಾಂಗ್ರೆಸ್‌ನ ರೆಹಮತ್ 13 ಮತಗಳನ್ನು ಪಡೆದು ವಿಜಯಿಯಾದರೆ, ಬಿಜೆಪಿಯ ಲಲಿತಾ ಆರ್. ಭಟ್ 12 ಮತಗಳನ್ನು ಪಡೆದುಕೊಂಡರು.
ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ ಮತದಾನದ ಹಕ್ಕು ಹೊಂದಿರುವ ಲೋಕಸಭಾ ಸದಸ್ಯ ಜಯಪ್ರಕಾಶ ಹೆಗ್ಡೆ ಮತ್ತು ಶಾಸಕ ವಿ. ಸುನಿಲ್ ಕುಮಾರ್ ಪಾಲ್ಗೊಂಡಿದ್ದರು.
ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿಗೆ ಮೀಸಲಾಗಿರುವುದರಿಂದ ಸಮುದಾಯದ ಏಕೈಕ ಸದಸ್ಯೆಯಾಗಿದ್ದ ಶಶಿಕಲಾ ಅವಿರೋಧವಾಗಿ ಆಯ್ಕೆಗೊಂಡರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement